ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ವೆಚ್ಚ ವೀಕ್ಷಕರ ನೇಮಕ

Published 13 ಏಪ್ರಿಲ್ 2024, 14:19 IST
Last Updated 13 ಏಪ್ರಿಲ್ 2024, 14:19 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ ಜಿಲ್ಲೆ): ಲೋಕಸಭಾ ಚುನಾವಣೆ ಹಿನ್ನೆಲೆ ಚುನಾವಣಾ ಆಯೋಗವು  ಚುನಾವಣಾ ವೆಚ್ಚದ ವೀಕ್ಷಕರನ್ನು ನಿಯೋಜಿಸಿದೆ.

ವಿಜಯನಗರ ಜಿಲ್ಲೆಯ ಹಡಗಲಿ, ಹಗರಿಬೊಮ್ಮನಹಳ್ಳಿ, ಕೂಡ್ಲಿಗಿ ವಿಧಾನಸಭಾ ಕ್ಷೇತ್ರ ಮತ್ತು ಬಳ್ಳಾರಿ ಜಿಲ್ಲೆಯ ಸಂಡೂರ ವಿಧಾನಸಭಾ ಕ್ಷೇತ್ರಗಳಿಗೆ ಐಆರ್‌ಎಸ್ ಅಧಿಕಾರಿ ಸುರೇಂದ್ರ ಪೌಲ್ ಕೆ. (9141086852) ಅವರು ಚುನಾವಣಾ ವೆಚ್ಚದ ವೀಕ್ಷಕರಾಗಿದ್ದಾರೆ.

ಬಳ್ಳಾರಿ ಜಿಲ್ಲೆಯ ಕಂಪ್ಲಿ, ಬಳ್ಳಾರಿ ಗ್ರಾಮಾಂತರ, ಬಳ್ಳಾರಿ ನಗರ ಮತ್ತು ವಿಜಯನಗರ ಜಿಲ್ಲೆಯ ವಿಜಯನಗರ ವಿಧಾನಸಭಾ ಕ್ಷೇತ್ರಗಳಿಗೆ ಐಆರ್‌ಎಸ್ ಅಧಿಕಾರಿ ಕೆ.ಕೃಷ್ಣಮೂರ್ತಿ (9141086851) ಅವರು ಚುನಾವಣಾ ವೆಚ್ಚದ ವೀಕ್ಷಕರಾಗಿದ್ದಾರೆ.

ಚುನಾವಣಾ ವೆಚ್ಚಕ್ಕೆ ಸಂಬಂಧಿಸಿದಂತೆ ದೂರುಗಳು ಇದ್ದಲ್ಲಿ ಸಾರ್ವಜನಿಕರು ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT