ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಈಶಾನ್ಯ ಪದವೀಧರರ ಚುನಾವಣೆ: ಜೂ.1ರಿಂದ ವಿಜಯನಗರ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

Published 21 ಮೇ 2024, 15:24 IST
Last Updated 21 ಮೇ 2024, 15:24 IST
ಅಕ್ಷರ ಗಾತ್ರ

ಹೊಸಪೇಟೆ(ವಿಜಯನಗರ): ಈಶಾನ್ಯ ಪದವೀಧರರ ಕ್ಷೇತ್ರದ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸುವ ಹಿನ್ನೆಲೆ ಜೂನ್ 1ರಂದು ಸಂಜೆ 6 ಗಂಟೆಯಿಂದ ಜೂನ್ 3ರ ಮಧ್ಯರಾತ್ರಿಯವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಅವರು ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ವ್ಯಾಪ್ತಿಯಲ್ಲಿ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ, ಸಮಾರಂಭ ಮಾಡುವುದು, ಮಾರಕಾಸ್ತ್ರ ತೆಗೆದುಕೊಂಡು ಹೋಗುವುದು, ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ. ಅಲ್ಲದೆ, ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿರ್ಬಂಧಿಸಲಾಗಿದೆ. ಆದೇಶ ಉಲ್ಲಂಘಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು. ಅಲ್ಲದೆ, ಈ ಆದೇಶವು ಚುನಾವಣಾ ಕಾರ್ಯನಿರತ ಸಿಬ್ಬಂದಿ, ಅಧಿಕಾರಿಗಳಿಗೆ ಮತ್ತು ಪೊಲೀಸ್ ಅಧಿಕಾರಿಗಳಿಗೆ ಹಾಗೂ ಮತಗಟ್ಟೆಗೆ ತೆರಳಿ ಮತದಾನ ಮಾಡುವ ಮತದಾರರಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಮದ್ಯ ಮರಾಟ ನಿಷೇಧ:

ಈಶಾನ್ಯ ಪದವೀಧರರ ಕ್ಷೇತ್ರದ ಚುನಾವಣೆಯ ಮತದಾನದ ಸಮಯದಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಅವರು ಆದೇಶ ಹೊರಡಿಸಿದ್ದಾರೆ.

ಜೂನ್ 3ರಂದು ಮತದಾನ ನಡೆಯಲಿದೆ. ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾನ ಕಾರ್ಯ ಸೂಸುತ್ರವಾಗಿ ನಡೆಯಲು ಜೂನ್ 1ರಂದು ಸಂಜೆ 4 ಗಂಟೆಯಿಂದ ಜೂನ್ 3ರ ಮಧ್ಯರಾತ್ರಿ 12ರವರೆಗೆ ಜಿಲ್ಲೆಯ ವ್ಯಾಪ್ತಿಯ ಎಲ್ಲಾ ತರಹದ ಮದ್ಯ ಮಾರಾಟ, ಶೇಖರಣೆ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT