ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮಲಾಪುರ ಬಳಿ ಬಸ್ ಅಪಘಾತ; 11 ಜನರಿಗೆ ಗಾಯ

Last Updated 15 ಜೂನ್ 2022, 3:46 IST
ಅಕ್ಷರ ಗಾತ್ರ

ಕಾನಹೊಸಹಳ್ಳಿ (ವಿಜಯನಗರ ಜಿಲ್ಲೆ): ಸಮೀಪದ ಅಮಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಕೆಎಸ್ಆರ್ ಟಿಸಿ ಬಸ್ ಅಪಘಾತಕ್ಕೆ ಒಳಗಾಗಿ 11 ಜನ ಗಾಯಗೊಂಡಿದ್ದಾರೆ.

ಮಂಗಳವಾರ ತಡರಾತ್ರಿ ಘಟನೆ ಜರುಗಿದೆ. ಮುಂದೆ ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಬಸ್ ಡಿಕ್ಕಿ ಹೊಡೆದಿದ್ದು, 11 ಜನರಿಗೆ ಗಾಯಗಳಾಗಿವೆ. ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಬಳ್ಳಾರಿಯ ವಿಮ್ಸ್ ಗೆ ಕಳಿಸಲಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಕಾನಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT