ಶನಿವಾರ, ಅಕ್ಟೋಬರ್ 1, 2022
20 °C

‘ಆರೋಗ್ಯವಾಗಿರಲು ಜಂತುಹುಳು ನಿವಾರಕ ಮಾತ್ರೆ ಸೇವನೆ ಅಗತ್ಯ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ‘ಜಂತುಹುಳು ಅನಾರೋಗ್ಯಕ್ಕೀಡು ಮಾಡುತ್ತದೆ. ಎರಡು ವರ್ಷ ಮೇಲಿನವರೆಲ್ಲ ಮಾತ್ರೆಗಳನ್ನು ತೆಗೆದುಕೊಂಡು ಆರೋಗ್ಯವಾಗಿ ಇರಬೇಕು’ ಎಂದು ಜಿಲ್ಲಾಧಿಕಾರಿ ಅನಿರುದ್ಧ್‌ ಶ್ರವಣ್‌ ಪಿ. ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಭಾಗಿತ್ವದಲ್ಲಿ ಬುಧವಾರ ನಗರದ ಪಾಂಡುರಂಗ ಕಾಲೊನಿಯ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಕ್ಕೆ ಚಾಲನೆ ನೀಡಿ ಮಾತನಾಡಿದರು.

ಜಂತುಹುಳು ನಮ್ಮ ಜಠರದ ಒಳಗೆ ಸೇರಿಕೊಂಡು ನಾವು ಸೇವಿಸುವ ಆಹಾರವನ್ನು ಹಾಗೂ ಅದರಲ್ಲಿರುವ ಪೋಷಕಾಂಶಗಳನ್ನು ನಮ್ಮ ದೇಹಕ್ಕೆ ಹೀರಿಕೊಳ್ಳಲು ಬಿಡದೆ ಅವುಗಳೇ ಹೀರಿಕೊಳ್ಳುತ್ತವೆ. ಇದರಿಂದ ಅನಾರೋಗ್ಯಕ್ಕೆ ಒಳಗಾಗಬಹುದು. ಅದಕ್ಕಾಗಿ ಆರು ತಿಂಗಳಿಗೆ ಒಂದು ಸಲ ‘ಆಲ್ಬಂಡೋಜೋಲ್’ ಮಾತ್ರೆ ಸೇವಿಸಿ ತಡೆಗಟ್ಟಬಹುದು ಎಂದು ತಿಳಿಸಿದರು.

ಶಾಲಾ ಮಕ್ಕಳು ಹೊರಗೆ ಹೋಗುವಾಗ ಶೂ ಅಥವಾ ಚಪ್ಪಲಿಯನ್ನು ಕಡ್ಡಾಯವಾಗಿ ಹಾಕಿಕೊಂಡು ಹೋಗುವುದರ ಮೂಲಕ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಕೋವಿಡ್ ಕಡಿಮೆಯಾಗಿದ್ದು, ಮಕ್ಕಳು ನಿತ್ಯ ಶಾಲೆಗೆ ಹೋಗಬೇಕು ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್‌ ನಾರಾಯಣ ರಾವ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸಲೀಂ, ನಗರಸಭೆ ಅಧ್ಯಕ್ಷೆ ಸುಂಕಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ತಾರಿಹಳ್ಳಿ ಜಂಭನಾಥ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ವೀರನಗೌಡ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ. ಕೊಟ್ರೇಶ್, ಎಸ್.ಡಿ.ಎಂ.ಸಿ ಅಧ್ಯಕ್ಷ ಪರುಶುರಾಮ್, ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು