ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹೊಸಪೇಟೆ | 27ಕ್ಕೆ ಗೆಜೆಟೆಡ್ ಪ್ರೊಬೇಷನರ್‌ ಪರೀಕ್ಷೆ

Published : 22 ಆಗಸ್ಟ್ 2024, 15:40 IST
Last Updated : 22 ಆಗಸ್ಟ್ 2024, 15:40 IST
ಫಾಲೋ ಮಾಡಿ
Comments

ಹೊಸಪೇಟೆ: ಆ.27ರಂದು ನಿಗದಿಯಾದ ಗೆಜೆಟೆಡ್ ಪ್ರೋಬೇಷನರಿ ಗ್ರೂಪ್ ಎ ಮತ್ತು ಬಿ ವೃಂದಗಳ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯ ಹಿನ್ನೆಲೆಯಲ್ಲಿ ಗುರುವಾರ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಸಿದ್ಧತಾ ಸಭೆ ನಡೆಸಿದರು.

13 ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣವನ್ನು ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಆದೇಶಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ ಝರಾಕ್ಸ್ ಮತ್ತು ಕಂಪ್ಯೂಟರ್ ಅಂಗಡಿಗಳನ್ನು ಮುಚ್ಚಲು ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಒಟ್ಟು 13 ಜನ ಅಧಿಕಾರಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಮಾರ್ಗಾಧಿಕಾರಿಗಳನ್ನಾಗಿ ನೇಮಿಸಲಾಗಿದ್ದು, ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ಬಾಕ್ಸ್‌ಗಳನ್ನು ವಿತರಿಸಲು ನಿಯಮಾನುಸಾರ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು. ಸಭೆಯಲ್ಲಿ ತ್ರಿಸದಸ್ಯ ಸಮಿತಿಯ ಅಧಿಕಾರಿಗಳು, ಪರೀಕ್ಷಾ ಕೇಂದ್ರಗಳ ವೀಕ್ಷಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT