ಹೊಸಪೇಟೆ (ವಿಜಯನಗರ): ಫೇಸ್ಬುಕ್ನಲ್ಲಿ ಹಿಂದೂ ಧರ್ಮ ಮತ್ತು ಮಹಿಳೆಯರಿಗೆ ಅವಮಾನಕರ ರೀತಿಯಲ್ಲಿ ವಿಡಿಯೊಗಳನ್ನು ಪೋಸ್ಟ್ ಮಾಡಿರುವ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಮಂಗಳವಾರ ಇಲ್ಲಿನ ಎಸ್ಪಿ ಕಚೇರಿ ಬಳಿ ದಿಢೀರ್ ಪ್ರತಿಭಟನೆ ನಡೆಯಿತು.

ಪಕ್ಷದ ಜಿಲ್ಲಾ ಘಟಕದ ಉಪಾಧ್ಯಕ್ಷ ಸಂದೀಪ್ ಸಿಂಗ್, ನಗರಸಭೆ ಅಧ್ಯಕ್ಷ ಎನ್.ರೂಪೇಶ್ ಕುಮಾರ್ ನೇತೃತ್ವದಲ್ಲಿ ಎಸ್ಪಿ ಕಚೇರಿಗೆ ತೆರಳಿದ ನಿಯೋಗ, ತಾವು ನ್ಯಾಯ ಕೇಳಲು ಬಂದಿದ್ದೇವೆ, ತಕ್ಷಣ ಆರೋಪಿ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

‘ಮಾರ್ಚ್ 5ರಂದು ಫೇಸ್ಬುಕ್ ನೋಡುತ್ತಿದ್ದಾಗ ಹಿಂದೂಗಳ ಭಾವನೆಗೆ, ಮಹಿಳೆಯರ ಘನತೆಗೆ ಧಕ್ಕೆ ತರುವಂತಹ ಪೋಸ್ಟ್ಗಳನ್ನು ಗಮನಿಸಿದ್ದರು. ಇಂತಹ ವಿಡಿಯೊ ಪೋಸ್ಟ್ ಮಾಡಿದ ಮತ್ತು ಶೇರ್ ಮಾಡಿದ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಿದರೆ ಜಗದೀಶ್ ಅವರಿಗೆ ಪೊಲೀಸ್ ಇಲಾಖೆಯಿಂದಲೇ ದೂರು ಹಿಂಪಡೆಯುವಂತೆ ಸೂಚಿಸಿ ಬೆದರಿಕೆ ಬಂದಿದೆ. ಇದನ್ನು ಸಹಿಸಲಾಗದು. ಪೊಲೀಸ್ ಇಲಾಖೆ ತಕ್ಷಣ ತಪ್ಪು ಎಸಗಿದ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಬೇಕು, ತಪ್ಪಿದಲ್ಲಿ ಮಾರ್ಚ್ 15ರಂದು ವಿವಿಧ ಸಂಘಟನೆಗಳ ಜತೆಗೂಡಿ ಬೃಹತ್ ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಲಾಯಿತು.

ಎರಡು ತಿಂಗಳ ಹಿಂದೆ ಸಹ ಇಂತಹದೇ ಒಂದು ಪ್ರಸಂಗ ನಡೆದಾಗಲೂ ಆರೋಪಿ ವಿರುದ್ಧ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಲಾಯಿತು.

ಇದಕ್ಕೆ ಸ್ಪಂದಿಸಿದ ಎಸ್ಪಿ ಎಸ್.ಜಾಹ್ನವಿ, ‘ದೂರು ನೀಡಿದವರ ವಿರುದ್ಧವೇ ಪೊಲೀಸ್ ಇಲಾಖೆಯಿಂದ ಬೆದರಿಕೆ ಬಂದರೆ ಅದನ್ನು ಸಹಿಸಲಾಗದು, ಅದರ ಬಗ್ಗೆ ವಿಚಾರಣೆ ನಡೆಸಲಾಗುವುದು. ಇಂತಹ ಪ್ರಕರಣಗಳಲ್ಲಿ ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಕ್ಕೆ 14 ದಿನಗಳ ಕಾಲಾವಕಾಶ ಇದೆ. ನಾವು ಸೂಕ್ತ ರೀತಿಯಿಂದ ಕ್ರಮ ಕೈಗೊಳ್ಳುತ್ತೇವೆ’ ಎಂದು ಭರವಸೆ ನೀಡಿದರು.

ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಅಯ್ಯಾಳಿ ತಿಮ್ಮಪ್ಪ, ಜಿಲ್ಲಾ ವಕ್ತಾರ ಅಶೋಕ್ ಜೀರೆ, ನಗರಸಭೆ ಉಪಾಧ್ಯಕ್ಷ ಜೀವರತ್ನಂ, ಸ್ಥಾಯಿ ಸಮಿತಿ ಅಧ್ಯಕ್ಷ ಶರವಣ, ಸದಸ್ಯರಾದ ಕಿರಣ್ ಶಂಕ್ರಿ, ತಾರಿಹಳ್ಳಿ ಜಂಬುನಾಥ, ಬುಜ್ಜಿ ಹನುಮಂತ, ರಮೇಶ್ ಗುಪ್ತ, ಕಾಸಿಟ್ಟಿ ಉಮಾಪತಿ, ಮಧುರಚನ್ನ ಶಾಸ್ತ್ರಿ, ಉಮಾ, ಅನುರಾಧಾ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.