ಮರಿಯಮ್ಮನಹಳ್ಳಿ (ಹೊಸಪೇಟೆ ತಾಲ್ಲೂಕು): ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗಿದ್ದ ರೈತ ಉಂಚಟ್ಟಿ ಬೊಮ್ಮಪ್ಪ (62) ಅವರ ಮೃತದೇಹ ಪತ್ತೆಯಾಗಿದ್ದು, ಶವವಿಟ್ಟುಕೊಂಡು ಗ್ರಾಮಸ್ಥರು ಜಿ.ನಾಗಲಾಪುರದ ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಹಳ್ಳಕ್ಕೆ ಸೇತುವೆ ನಿರ್ಮಿಸಬೇಕೆಂದು ಹಲವು ವರ್ಷಗಳಿಂದ ಆಗ್ರಹಿಸುತ್ತ ಬಂದರೂ ಕ್ರಮ ಕೈಗೊಂಡಿಲ್ಲ. ನಿರ್ಲಕ್ಷ್ಯದಿಂದ ರೈತ ಮೃತಪಟ್ಟಿದ್ದಾನೆ. ಅವರ ಕುಟುಂಬಕ್ಕೆ ಪರಿಹಾರ ನೀಡಬೇಕು. ಹಳ್ಳಕ್ಕೆ ಸೇತುವೆ ನಿರ್ಮಿಸಬೇಕೆಂದು ಆಗ್ರಹಿಸಿದರು.

ಭಾರಿ ಮಳೆಗೆ ರಭಸದಿಂದ ಹರಿಯುತ್ತಿದ್ದ ಹಳ್ಳದ ನೀರಿನಲ್ಲಿ ದಾಟಿಕೊಂಡು ಹೋಗುವಾ ಬೊಮ್ಮಪ್ಪ ಕೊಚ್ಚಿಕೊಂಡು ಹೋಗಿದ್ದರು. ಅಗ್ನಿಶಾಮಕ ಸಿಬ್ಬಂದಿ ಬಂದು ಶವ ಪತ್ತೆ ಹಚ್ಚಿದ್ದರು.

ತಹಶೀಲ್ದಾರ್ ವಿಶ್ವಜೀತ್ ಮೆಹ್ತಾ, ಕಂದಾಯನಿರೀಕ್ಷಕ ಅಂದಾನಗೌಡ, ಗ್ರಾಮಲೆಕ್ಕಿಗ ಬಸವರಾಜ, ಪಿ.ಡಿ.ಒ ರಾಘವೇಂದ್ರ, ಕೃಷಿ ಅಧಿಕಾರಿ ಶಿವಮೂರ್ತಿ ಇದ್ದರು.

ಹೊಸಪೇಟೆ| ಹಳ್ಳದ ನೀರಿನ ರಭಸಕ್ಕೆ ಕೊಚ್ಚಿ ಹೋದ ರೈತನಿಗಾಗಿ ಹುಡುಕಾಟ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.