ಸೋಮವಾರ, ಏಪ್ರಿಲ್ 12, 2021
23 °C

ಕಾಕುಬಾಳು: ರೈತ ನೇಣಿಗೆ ಶರಣು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯನಗರ (ಹೊಸಪೇಟೆ): ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದೆ, ಸಾಲದ ಬಾಧೆಗೆ ಬೇಸತ್ತು ತಾಲ್ಲೂಕಿನ ಕಾಕುಬಾಳು ಗ್ರಾಮದ ರೈತ ಗೌರಿಪುರದ ಮಂಜುನಾಥ (40) ಬುಧವಾರ ರಾತ್ರಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ಮಂಜುನಾಥ ಅವರು ಸಹಕಾರಿ ಬ್ಯಾಂಕಿನಲ್ಲಿ ₹5 ಲಕ್ಷ ಸಾಲ ಮಾಡಿದ್ದರು. ಎರಡು ಎಕರೆಯಲ್ಲಿ ಬೆಳೆದಿದ್ದ ಟೊಮೊಟೊಗೆ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ಸಿಕ್ಕಿರಲಿಲ್ಲ. ನಷ್ಟಕ್ಕೆ ಒಳಗಾಗಿ ಮನನೊಂದಿದ್ದ ಅವರು ಬುಧವಾರ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಜೀವ ತ್ಯಜಿಸಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ. ಗಾದಿಗನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು