ಮರಿಯಮ್ಮನಹಳ್ಳಿ (ವಿಜಯನಗರ ಜಿಲ್ಲೆ): ಪಟ್ಟಣದ ಹೊರವಲಯದ ಕೆಪಿಟಿಸಿಎಲ್ ಕಚೇರಿ ಮುಂಭಾಗದ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಗುರುವಾರ ಮಧ್ಯರಾತ್ರಿ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ದಂಪತಿ ಮೃತಪಟ್ಟಿದ್ದು, ಅವರ ಮೂವರು ಮಕ್ಕಳು ತೀವ್ರವಾಗಿ ಗಾಯಗೊಂಡಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಚೆಟ್ನಿಹಾಳು ಗ್ರಾಮದ ಕ್ಯಾಬ್ ಚಾಲಕ ಮುತ್ತಪ್ಪ ಪೂಜಾರ್ (35), ಅವರ ಪತ್ನಿ ರೇಣುಕಾ (30) ಮೃತರು. ಅವರ ಮಕ್ಕಳಾದ ಅನುಶ್ರೀ (9), ರೂಪಶ್ರೀ (6) ಹಾಗೂ ಖುಷಿ (4) ಗಂಭೀರ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪಳ ಆಸ್ಪತ್ರೆಯಿಂದ ಹುಬ್ಬಳ್ಳಿ ಆಸ್ಪತ್ರೆಗೆ ಕರೆದೊಯ್ಯುಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಮುತ್ತಪ್ಪ, ಮೊಹರಂ ಹಬ್ಬದ ಪ್ರಯುಕ್ತ ತಮ್ಮ ಸ್ವಗ್ರಾಮ ಚೆಟ್ನಿಹಾಳು ಗ್ರಾಮಕ್ಕೆ ಕುಟುಂಬದೊಂದಿಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಪಟ್ಟಣದ ಹೊರವಲಯದ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಬಂದ ಲಾರಿ ಕಾರಿಗೆ ಡಿಕ್ಕಿ ಹೊಡೆಯಿತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಪಘಾತದ ರಘಸಕ್ಕೆ ಲಾರಿ ಕಾರನ್ನು ಸುಮಾರು ಅರ್ಧ ಕಿಲೋಮೀಟರ್ಗೂ ಹೆಚ್ಚು ದೂರ ತಳ್ಳಿಕೊಂಡು ಹೋಗಿದ್ದು, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.

ಶುಕ್ರವಾರ ಬೆಳಿಗ್ಗೆ ಘಟನಾ ಸ್ಥಳಕ್ಕೆ ಎಸ್ಪಿ ಶ್ರೀಹರಿಬಾಬು ಬಿ.ಎಲ್. ಭೇಟಿ ನೀಡಿ ಪರಿಶೀಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.