ಹೂವಿನಹಡಗಲಿ: ಮಗ ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ಮನ ನೊಂದು ತಂದೆಯೂ ಆತ್ಮಹತ್ಯೆಗೆ ಶರಣಾದ ಘಟನೆ ತಾಲ್ಲೂಕಿನ ಹಿರೇಕೊಳಚಿ ಗ್ರಾಮದಲ್ಲಿ ಸೋಮವಾರ ಸಂಭವಿಸಿದೆ.

ದೊಡ್ಡಭೀಮಪ್ಪನವರ ಅಜ್ಜಪ್ಪ (18) ಮತ್ತು ಇವರ ತಂದೆ ದೊಡ್ಡಭರಮ್ಪನವರ ಪರಸಪ್ಪ (48) ಮೃತರು.

ಪರಸಪ್ಪನವರ ಪತ್ನಿ ಕೆಲ ತಿಂಗಳ ಹಿಂದೆ ಮೃತಪಟ್ಟಿದ್ದರು. ಬಳಿಕ ಅವರು ಮದ್ಯವ್ಯಸನಿಯಾಗಿದ್ದರು. ಮದ್ಯ ಸೇವಿಸಿ ಬಂದು ಮಗನನ್ನು ಅವಾಚ್ಯವಾಗಿ ನಿಂದಿಸುತ್ತಿದ್ದರು ಎನ್ನಲಾಗಿದೆ. ಇದರಿಂದ ಬೇಸತ್ತು ಮಗ ಅಜ್ಜಪ್ಪ ತಮ್ಮ ತೋಟದಲ್ಲಿನ ಮರಕ್ಕೆ ನೇಣು ಹಾಕಿಕೊಂಡಿದ್ದಾರೆ. ಬಳಿಕ ತಂದೆಯೂ ಹೊಲದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹಿರೇಹಡಗಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.