ಶುಕ್ರವಾರ, 2 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯನಗರ | ಯುವಕರ ಗುಂಪುಗಳ ನಡುವೆ ಗಲಾಟೆ; ಏಳು ಜನರ ಬಂಧನ

Last Updated 11 ಮಾರ್ಚ್ 2023, 4:13 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ತಾಲ್ಲೂಕಿನ ಮಲಪನಗುಡಿಯಲ್ಲಿ ಕುರುಬರು ಹಾಗೂ ಮಾದಿಗ ಸಮಾಜದ ಯುವಕರ ಗುಂಪುಗಳ ನಡುವೆ ನಡೆದ ಗಲಾಟೆಗೆ ಸಂಬಂಧಿಸಿ ಇಲ್ಲಿನ ಗ್ರಾಮೀಣ ಠಾಣೆ ಪೊಲೀಸರು ಏಳು ಜನರನ್ನು ಬಂಧಿಸಿದ್ದಾರೆ.

ಹೋಳಿ ಹಬ್ಬದ ದಿನ ಮಾದಿಗ ಹಾಗೂ ಕುರುಬ ಸಮುದಾಯದ ಯುವಕರ ನಡುವೆ ಕ್ಷುಲ್ಲಕ ಕಾರಣಕ್ಕೆ ವಾಗ್ವಾದ ನಡೆದಿತ್ತು. ಬಳಿಕ ಗ್ರಾಮದಲ್ಲಿ ಎರಡು ಕಡೆಯವರ ಗುಂಪುಗಳ ನಡುವೆ ಗುರುವಾರ ಜಗಳ ಉಂಟಾಗಿತ್ತು. ಎರಡು ಕಡೆಯವರು ಪರಸ್ಪರ ಕಲ್ಲು ತೂರಾಟ ನಡೆಸಿದ್ದರು. ಮನೆಗಳಿಗೆ ನುಗ್ಗಿ ದಾಂಧಲೆ ನಡೆಸಿ ಒಳಗಿದ್ದ ವಸ್ತುಗಳನ್ನು ಹಾಳುಗೆಡವಿದ್ದರು. ಬೈಸಿಕಲ್, ದ್ವಿಚಕ್ರ ವಾಹನಗಳಿಗೆ ಹಾನಿ ಉಂಟು ಮಾಡಿದ್ದರು. ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ಘಟನೆಗೆ ಸಂಬಂಧಿಸಿ ಈಗ ಏಳು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಎಸ್ಪಿ ಶ್ರೀಹರಿಬಾಬು ಬಿ.ಎಲ್. ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT