ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಂಪಿಯಲ್ಲಿ ಅಗ್ನಿ ಅನಾಹುತ; ಮೂರು ವಾಣಿಜ್ಯ ಮಳಿಗೆ ಭಸ್ಮ

Last Updated 28 ಅಕ್ಟೋಬರ್ 2022, 3:54 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದ ಮಗ್ಗುಲಲ್ಲಿರುವ 'ಮ್ಯಾಂಗೋ ಟ್ರೀ' ಹೋಟೆಲ್‌ನಲ್ಲಿ ಗುರುವಾರ ರಾತ್ರಿ ಅಗ್ನಿ ಅನಾಹುತ ಸಂಭವಿಸಿದ್ದು, ಘಟನೆಯಲ್ಲಿ ಯಾವುದೇ ಸಾವು ನೋವು ಉಂಟಾಗಿಲ್ಲ.

ಹೋಟೆಲ್‌ನಲ್ಲಿ ರಾತ್ರಿ ಯಾರೂ ಇಲ್ಲದ ವೇಳೆ ಸಿಲಿಂಡರ್ ಸ್ಫೋಟಗೊಂಡು ಇಡೀ ಹೋಟೆಲ್‌ ಧಗಧಗನೆ ಹೊತ್ತಿ ಉರಿದಿದೆ. ಅದರ ಪಕ್ಕದ ಬಟ್ಟೆ ಮಳಿಗೆ, ಶೆಡ್ ಕೂಡ ಬೆಂಕಿ ಜ್ವಾಲೆಗೆ ಸುಟ್ಟು ಹೋಗಿವೆ. ಸ್ಫೋಟದಿಂದ ಸ್ಮಾರಕಗಳಿಗೆ ಯಾವುದೇ ಧಕ್ಕೆ‌ ಉಂಟಾಗಿಲ್ಲ.

ಹೋಟೆಲ್‌ನಲ್ಲಿಶಾಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡು ಸಿಲಿಂಡರ್ ಸ್ಫೋಟವಾಗಿರುವ ಸಾಧ್ಯತೆ ಇದೆ. ಏಳರಿಂದ ಎಂಟು ಸಿಲಿಂಡರ್‌ಗಳನ್ನು ಹೋಟೆಲ್‌ನಲ್ಲಿ ಇಡಲಾಗಿತ್ತು. ಅಗ್ನಿಶಾಮಕ ದಳದವರು ಸಕಾಲಕ್ಕೆ ಬಂದು ಬೆಂಕಿ‌ ನಂದಿಸಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ‌ ಎಂದು ಪೊಲೀಸರು ತಿಳಿಸಿದ್ದಾರೆ.

'ಮ್ಯಾಂಗೋ ಟ್ರೀ' ಹೋಟೆಲ್ ಹಂಪಿಯಲ್ಲಿ ಬಹಳ ಪ್ರಸಿದ್ಧವಾಗಿದ್ದು ದೇಶ-ವಿದೇಶದ ಜನ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ಕೊಡುತ್ತಾರೆ. ಮೇಲಿಂದ ವಿರೂಪಾಕ್ಷ ದೇವಸ್ಥಾನಕ್ಕೆ ಹೊಂದಿಕೊಂಡಿದ್ದು, ಜನರಿಗೆ ಅನುಕೂಲವಾಗಿದೆ.

ಹೋಟೆಲ್ ಇರುವ ಪ್ರದೇಶ ಜನತಾ ಕಾಲೊನಿಯಂದೆ ಗುರುತಿಸಿಕೊಂಡಿದ್ದು, ಇದು ವಾಣಿಜ್ಯ ಚಟುವಟಿಕೆಗಳಿಗೆ ಹೆಸರಾಗಿದೆ. ಇಲ್ಲಿರುವ ಮಳಿಗೆಗಳನ್ನು ಸ್ಥಳಾಂತರಿಸಲು ಹಂಪಿ ಪ್ರಾಧಿಕಾರ ಮುಂದಾಗಿದ್ದು, ಕೋರ್ಟ್ ನಲ್ಲಿ ವ್ಯಾಜ್ಯ ನಡೆಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT