ಗುರುವಾರ , ಜೂನ್ 30, 2022
25 °C

ತುಂಗಭದ್ರಾ ಹಿನ್ನೀರಿನಲ್ಲಿ ಮೀನುಗಾರಿಕೆ ನಿಷೇಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ‘ಜೂನ್‌ನಿಂದ ಸೆ. 30ರ ವರೆಗೆ ತುಂಗಭದ್ರಾ ಜಲಾಶಯದ ಹಿನ್ನೀರಿನಲ್ಲಿ ಮೀನಿನ ಸಂತಾನೋತ್ಪತ್ತಿ ಕಾರ್ಯಕ್ಕೆ ಸಮಯ ಮೀಸಲಿಡಲಾಗಿದೆ. ಒಳಹರಿವು ಸಹ ಹೆಚ್ಚಾಗಿರುವುದರಿಂದ ಎಲ್ಲ ರೀತಿಯ ಮೀನುಗಾರಿಕೆ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ಜೂ.1ರಿಂದಲೇ ಈ ನಿಷೇಧ ಅನ್ವಯಿಸುತ್ತದೆ’ ಎಂದು ತುಂಗಭದ್ರಾ ಜಲಾಶಯ ಆಡಳಿತ ಮಂಡಳಿಯ ಕಾರ್ಯದರ್ಶಿ ಜಿ. ನಾಗಮೋಹನ್ ತಿಳಿಸಿದ್ದಾರೆ.

‘ಕಾನೂನುಬಾಹಿರವಾಗಿ ಮೀನುಗಾರಿಕೆ ನಡೆಸಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಅವರ ಬಳಿಯಿರುವ ಮೀನುಗಾರಿಕೆಯ ಪರಿಕರಗಳನ್ನು ವಶಪಡಿಸಿಕೊಳ್ಳಲಾಗುವುದು. ಮೀನುಗಾರಿಕೆ ವೇಳೆ ಯಾವುದಾದರೂ ದುರ್ಘಟನೆ ಸಂಭವಿಸಿದರೆ ಅದಕ್ಕೆ ಮಂಡಳಿ ಹೊಣೆಯಲ್ಲ. ಜಲಾಶಯದ ಹಿನ್ನೀರಿನಲ್ಲಿ 40 ಸಾವಿರ ಸಾಮಾನ್ಯ ಗೆಂಡೆ ಬಿತ್ತನೆ ಮೀನು ಮರಿಗಳಿವೆ’ ಎಂದು ಶುಕ್ರವಾರ ಹೇಳಿದ್ದಾರೆ.

ಮಂಡಳಿಯ ಹಿರಿಯ ಅಧಿಕಾರಿಗಳಾದ ವಿ.ಶ್ರೀನಿವಾಸ ರೆಡ್ಡಿ, ಸಹಾಯಕ ಕಾರ್ಯದರ್ಶಿ ಅಮರನಾಥ ರೆಡ್ಡಿ, ಬಿ.ವಿ.ಕುಮಾರಸ್ವಾಮಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.