ಶುಕ್ರವಾರ, ಸೆಪ್ಟೆಂಬರ್ 17, 2021
22 °C

ಹೊಸಪೇಟೆ: ತುಂಗಭದ್ರಾ ನದಿಯಲ್ಲಿ ಪ್ರವಾಹದ ಎಚ್ಚರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ ಆಗುತ್ತಿರುವುದರಿಂದ ಭಾರಿ ಪ್ರಮಾಣದಲ್ಲಿ  ಜಲಾಶಯಕ್ಕೆ ನೀರು ಹರಿದು ಬರುತ್ತಿದ್ದು, ಯಾವುದೇ ಕ್ಷಣದಲ್ಲಿ ನದಿಗೆ ನೀರು ಹರಿಸುವ ಸಾಧ್ಯತೆ ಇದೆ. ನದಿ ಪಾತ್ರದಲ್ಲಿ ಜನ ಓಡಾಡದಂತೆ ಎಚ್ಚರಿಕೆ ನೀಡಲಾಗಿದೆ.

‘ಶಿವಮೊಗ್ಗ, ದಾವಣಗೆರೆ ಸುತ್ತಮುತ್ತ ಉತ್ತಮ ಮಳೆಯಾಗುತ್ತಿದೆ. 60,000 ಕ್ಯುಸೆಕ್‌ಗೂ ಅಧಿಕ ನೀರು ಸದ್ಯ ಜಲಾಶಯಕ್ಕೆ ಹರಿದು ಬರುತ್ತಿದೆ. ಇದು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. 1,633 ಅಡಿ ನೀರು ಸಂಗ್ರಹ ಸಾಮರ್ಥ್ಯದ ತುಂಗಭದ್ರಾ ಜಲಾಶಯ ಈಗಾಗಲೇ ಸಂಪೂರ್ಣ ಭರ್ತಿಯಾಗಿದೆ. ಹೆಚ್ಚುವರಿ ನೀರು ಬರುತ್ತಿರುವುದರಿಂದ ನದಿಗೆ ನೀರು ಹರಿಸುವುದು ಅನಿವಾರ್ಯವಾಗಿದೆ. 

ಆರಂಭದಲ್ಲಿ 50,000 ಕ್ಯುಸೆಕ್‌ಗೂ ಹೆಚ್ಚು ನೀರು ನದಿಗೆ ಹರಿಸಲಾಗುವುದು. ನದಿ ಪಾತ್ರದಲ್ಲಿ ಜನರು ಜಾನುವಾರುಗಳೊಂದಿಗೆ ತೆರಳಬಾರದು. ತೆಪ್ಪ, ಮೋಟಾರ್‌ ದೋಣಿಗಳೊಂದಿಗೆ ಸಂಚರಿಸಬಾರದು. ಬಳ್ಳಾರಿ, ಕೊಪ್ಪಳ ಹಾಗೂ ರಾಯಚೂರು ಜಿಲ್ಲಾಡಳಿತಗಳು ಅಗತ್ಯ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು’ ಎಂದು ತುಂಗಭದ್ರಾ ಜಲಾಶಯ ಆಡಳಿತ ಮಂಡಳಿಯ ಎಂಜಿನಿಯರ್‌ ವಿಶ್ವನಾಥ್‌ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು