ಹೊಸಪೇಟೆ (ವಿಜಯನಗರ): ವಿಜಯನಗರ ವಿಧಾನಸಭಾ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಸಿರಾಜ್ ಶೇಖ್ ಅವರಿಗೆ ವಿಜಯನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ನೇಮಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಈ ಮೂಲಕ ಅವರ ಅಸಮಾಧಾನ ತಣಿಸುವ ಕೆಲಸ ಮಾಡಿದ್ದಾರೆ.
ಅಖಂಡ ಬಳ್ಳಾರಿ ಜಿಲ್ಲೆಗೆ ಇದುವರೆಗೆ ಬಿ.ವಿ. ಶಿವಯೋಗಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿದ್ದರು. ಇತ್ತೀಚೆಗೆ ಪಕ್ಷವು ವಿಜಯನಗರ ಕ್ಷೇತ್ರಕ್ಕೆ ಮಾಜಿಶಾಸಕ ಎಚ್.ಆರ್. ಗವಿಯಪ್ಪ ಅವರ ಹೆಸರನ್ನು ಅಂತಿಮಗೊಳಿಸಿತು. ಸಿರಾಜ್ ಶೇಖ್ ಸೇರಿದಂತೆ ಒಟ್ಟು 12 ಜನ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದರು.
ವಿಜಯನಗರ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರ ಹೆಚ್ಚಿನ ಮತಗಳಿವೆ. ಆ ಮತಗಳು ಬೇರೆ ಪಕ್ಷಕ್ಕೆ ಹೋಗದಂತೆ ತಡೆಯಲು ಈಗ ಸಿರಾಜ್ ಶೇಖ್ ಅವರನ್ನು ಪಕ್ಷದ ಅಧ್ಯಕ್ಷರಾಗಿ ನೇಮಿಸಲಾಗಿದೆ. ತೀವ್ರ ಅಸಮಾಧಾನಗೊಂಡಿದ್ದ ಅವರನ್ನು ಸಮಾಧಾನ ಪಡಿಸುವ ಕೆಲಸವೂ ಇದರ ಮೂಲಕ ಮಾಡಲಾಗಿದೆ. ಇನ್ನೊಬ್ಬ ಮುಖಂಡ ಮಹಮ್ಮದ್ ಇಮಾಮ್ ನಿಯಾಜಿ ಅವರಿಗೆ ಇತ್ತೀಚೆಗೆ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷರಾಗಿ ಪಕ್ಷ ನೇಮಿಸಿತ್ತು
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.