ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹೂವಿನಹಡಗಲಿ: ನಾಲ್ವರು ಬಾಲ ಕಾರ್ಮಿಕರ ರಕ್ಷಣೆ

Published : 23 ಆಗಸ್ಟ್ 2024, 15:25 IST
Last Updated : 23 ಆಗಸ್ಟ್ 2024, 15:25 IST
ಫಾಲೋ ಮಾಡಿ
Comments

ಹೂವಿನಹಡಗಲಿ: ಪಟ್ಟಣದಲ್ಲಿ ತಾಲ್ಲೂಕು ಕಾರ್ಯಪಡೆ ಅಧಿಕಾರಿಗಳು ಗುರುವಾರ ದಾಳಿ ನಡೆಸಿ ನಾಲ್ಕು ಜನ ಬಾಲ ಕಾರ್ಮಿಕರನ್ನು ರಕ್ಷಿಸಿದ್ದಾರೆ.

ಪಟ್ಟಣದ ಗ್ಯಾರೇಜ್, ಎಂಜಿನಿಯರಿಂಗ್ ವರ್ಕ್ಸ್ ಗಳಲ್ಲಿ 12 ವರ್ಷದೊಳಗಿನ ಅಪ್ರಾಪ್ತ ಬಾಲಕರನ್ನು ಕೆಲಸಕ್ಕೆ ಇರಿಸಿಕೊಂಡಿದ್ದರು. ಕಾರ್ಮಿಕ ಇಲಾಖೆ ಅಧಿಕಾರಿಗಳು ಹಾಗೂ ಟಾಸ್ಕ್ ಪೋರ್ಸ್ ಸಮಿತಿಯ ಅಧಿಕಾರಿಗಳು ಜಂಟಿ ದಾಳಿ ನಡೆಸಿ ಬಾಲಕಾರ್ಮಿಕರನ್ನು ರಕ್ಷಿಸಿದ್ದಾರೆ.

‘ಪೋಷಕರಿಂದ ಮುಚ್ಚಳಿಕೆ ಪತ್ರ ಬರೆಯಿಸಿಕೊಂಡು ಬಾಲ ಕಾರ್ಮಿಕರನ್ನು ಪೋಷಕರ ವಶಕ್ಕೆ ಒಪ್ಪಿಸಲಾಗಿದೆ’ ಎಂದು ಕಾರ್ಮಿಕ ನಿರೀಕ್ಷಕ ಮೌನೇಶ್ ತಿಳಿಸಿದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಸೂರಪ್ಪ ಡೊಂಬರಮಠ, ಬಿಸಿಎಂ ಅಧಿಕಾರಿ ಎಂ.ಪಿ.ಎಂ.ಅಶೋಕ, ಸಿಡಿಪಿಒ ರಾಮಗೌಡ, ಎಎಸ್ಐ ರಾಜೇಂದ್ರನಾಯ್ಕ, ಯಾಸೀನ್ ಜಮಾದಾರ್, ಮಿಟ್ಯಾನಾಯ್ಕ, ಓಬಳೇಶ, ಸಾಹಿಬಣ್ಣ, ಎಂ. ಕಿರಣಕುಮಾರ್ ದಾಳಿಯಲ್ಲಿ ಭಾಗವಹಿಸಿದ್ದರು.

ಕಾರ್ಮಿಕ ನಿರೀಕ್ಷಕರು ನೀಡಿದ ದೂರಿನ ಮೇರೆಗೆ ಅಪ್ರಾಪ್ತ ಬಾಲಕರನ್ನು ಕೆಲಸಕ್ಕೆ ಸೇರಿಸಿಕೊಂಡಿದ್ದ ಐಯಾನ್ ಎಂಜಿನಿಯರಿಂಗ್ ವರ್ಕ್ಸ್, ದಾವಲ್ ಎಂಜಿನಿಯರಿಂಗ್ ವರ್ಕ್ಸ್, ಸಂತು ಗ್ಯಾರೇಜ್, ಬಳಿಗಾರ್ ಎಂಜಿನಿಯರಿಂಗ್ ವರ್ಕ್ಸ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪಿಎಸ್ಐ ವಿಜಯಕೃಷ್ಣ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT