ಬುಧವಾರ, ಮೇ 18, 2022
24 °C

ವಿದ್ಯುತ್ ಶಾರ್ಟ್ ಸರ್ಕ್ಯೂಟ್, ಎಸಿ ಲೀಕ್: ಒಂದೇ ಕುಟುಂಬದ ನಾಲ್ವರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ವಿದ್ಯುತ್ ಶಾರ್ಟ್ ಸರ್ಕ್ಯೂಟ್ , ಎಸಿ ಲೀಕ್ ಆಗಿ ಮನೆಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಒಂದೇ ಕುಟುಂಬದ ನಾಲ್ವರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಮರಿಯಮ್ಮನಹಳ್ಳಿಯಲ್ಲಿ ಗುರುವಾರ ತಡರಾತ್ರಿ ನಡೆದಿದೆ.

ಡಿ. ವೆಂಕಟ್ ಪ್ರಶಾಂತ್ (42), ಅವರ ಪತ್ನಿ ಡಿ. ಚಂದ್ರಕಲಾ (38), ಮಕ್ಕಳಾದ ಎಚ್.ಎ. ಅರ್ದ್ವಿಕ್ (16), ಪ್ರೇರಣಾ (8)  ಮೃತರು.

ಮರಿಯಮ್ಮನಹಳ್ಳಿಯ ಐದನೇ ವಾರ್ಡಿನ ರಾಘವೇಂದ್ರ ಶೆಟ್ಟಿ ಅವರ ಮನೆಯಲ್ಲಿ ಗುರುವಾರ ತಡರಾತ್ರಿವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿದೆ. ಬಳಿಕ ಎಸಿ ಲೀಕ್ ಆಗಿದೆ. ವಿಷಯ ಅರಿತು ಮನೆಯ ಕೆಳಭಾಗದಲ್ಲಿ ಮಲಗಿದ್ದ ರಾಘವೇಂದ್ರ ಶೆಟ್ಟಿ, ಅವರ ಪತ್ನಿ ರಾಜೇಶ್ವರಿ ಮನೆಯಿಂದ ಹೊರಗಡೆ ಓಡಿ ಬಂದಿದ್ದಾರೆ. ಆದರೆ, ಮನೆಯ ಮೊದಲ ಮಹಡಿಯ ಬೆಡ್ ರೂಮ್ ನಲ್ಲಿ ಮಲಗಿದ್ದ ವೆಂಕಟ್ ಪ್ರಶಾಂತ್, ಚಂದ್ರಕಲಾ, ಅರ್ದ್ವಿಕ್ ಹಾಗೂ ಪ್ರೇರಣಾ ಹೊರಗೆ ಬರಲಾಗದೆ ಉಸಿರುಗಟ್ಟಿ, ಸುಟ್ಟ ಗಾಯಗಳಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ತಿಳಿಸಿದ್ದಾರೆ.

ಇವನ್ನೂ ಓದಿ..

 ಇಂಡೋ ಅಮೆರಿಕನ್ ವೇದಾಂತ್ ಪಟೇಲ್ ‘ಸೂಪರ್ ಟ್ಯಾಲೆಂಟೆಡ್’ಎಂದ ಶ್ವೇತಭವನದ ಅಧಿಕಾರಿ

 ಜನ ಏನಾದರೂ ಮಾತಾಡ್ತಾರೆ.. ಸುಪ್ರಿಯಾ ಜತೆಗಿನ ಸಂಭಾಷಣೆ ಬಗ್ಗೆ ತರೂರ್ ಹೇಳಿದ್ದೇನು?

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು