ಭಾನುವಾರ, ಜುಲೈ 3, 2022
27 °C

ಹೊಸಪೇಟೆ: 5 ದಿನ ಉಚಿತ ಶಸ್ತ್ರಚಿಕಿತ್ಸಾ ಶಿಬಿರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ(ವಿಜಯನಗರ): 'ಲೈಫ್‌ಲೈನ್ ಆಸ್ಪತ್ರೆ ಮೊದಲ ವರ್ಷಾಚರಣೆ ಅಂಗವಾಗಿ ಜ.10 ರಿಂದ 15ರ ವರೆಗೂ ಆಸ್ಪತ್ರೆಯಲ್ಲಿ ವಿವಿಧ ಕಾಯಿಲೆಗಳಿಗೆ ಉಚಿತ ಶಸ್ತ್ರಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿದೆ' ಎಂದು ವೈದ್ಯ ರಘುನಾಥ್ ದೀಪಾಲಿ ತಿಳಿಸಿದರು.

‘ಐದು ದಿನಗಳ ಉಚಿತ ಶಸ್ತ್ರಚಿಕಿತ್ಸಾ ಶಿಬಿರದಲ್ಲಿ ಪಿಡಿಯಾಟ್ರಿಕ್, ಜನರಲ್ ಲ್ಯಾಟ್ರೋಸ್ಕೋಪಿಕ್, ಎಲುಬು, ಕೀಲು, ಆರ್ಥೋಸ್ಕೋಪಿಕ್ ಹಾಗೂ ಮಹಿಳೆಯರ ಕಾಯಿಲೆಗಳಿಗೆ ಸಂಬಂಧಿಸಿದಂತೆ‌ ಶಸ್ತ್ರಚಿಕಿತ್ಸೆ ನೆರವೇರಿಸಲಾಗುತ್ತದೆ’ ಎಂದು ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.

‘ಆಸ್ಪತ್ರೆಯ ವೈದ್ಯರಾದ ಶಿರಿಷಾ, ಅಭಿನಂದನ್ ಹಾಗೂ ನನ್ನ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ನಡೆಯಲಿದೆ. 60 ರಿಂದ 70 ಜನರಿಗೆ ಶಸ್ತ್ರಚಿಕಿತ್ಸೆ ನಡೆಸುವ ಗುರಿ ಹೊಂದಲಾಗಿದೆ’ ಎಂದು ತಿಳಿಸಿದರು.

‘ಆಸ್ಪತ್ರೆ ಆರಂಭವಾಗಿ ಒಂದು ವರ್ಷವಾಗಿದೆ. ಪ್ರಾರಂಭದಿಂದಲೂ ಆಸ್ಪತ್ರೆ ಜನಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತ ಬಂದಿದೆ. ಕೋವಿಡ್ ಎರಡನೆ ಅಲೆಯ ಸಮಯದಲ್ಲೂ ಜನರಿಗೆ ಚಿಕಿತ್ಸೆ ನೀಡಲಾಗಿದೆ. ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರಗಳನ್ನು ಆಯೋಜಿಸುತ್ತ ಬರಲಾಗಿದೆ’ ಎಂದು ಮಾಹಿತಿ ಹಂಚಿಕೊಂಡರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು