ಹೊಸಪೇಟೆ (ವಿಜಯನಗರ): ತಾಲ್ಲೂಕಿನ ಗಾದಿಗನೂರಿನಲ್ಲಿ ಸೆ.27ರಂದು ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ 11 ಮಂದಿಯ ಪೈಕಿ ಇಬ್ಬರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶುಕ್ರವಾರ ಮೃತಪಟ್ಟಿದ್ದಾರೆ.
.ಹೊಸಪೇಟೆ| ಸಿಲಿಂಡರ್ ಸ್ಫೋಟ: 7 ಮಂದಿಗೆ ಗಾಯ.
ವೃತ್ತಿಯಲ್ಲಿ ವಕೀಲರಾಗಿದ್ದ ಹಾಲಪ್ಪ (43) ಮತ್ತು ಅವರ ತಾಯಿ ಗಂಗಮ್ಮ (80) ಮೃತರು. ಇನ್ನೊಬ್ಬ ಗಾಯಾಳು, ಹಾಲಪ್ಪ ಅವರ ಪತ್ನಿ ಕವಿತಾ (35) ಅವರ ಸ್ಥಿತಿ ಈಗಲೂ ಗಂಭೀರವಾಗಿಯೇ ಇದೆ ಎಂದು ಗ್ರಾಮೀಣ ಠಾಣೆ ಪೊಲೀಸ್ ಮೂಲಗಳು ತಿಳಿಸಿವೆ.

ಎಲ್ಲ ಗಾಯಾಳುಗಳನ್ನು ಮೊದಲಿಗೆ ತೋರಣಗಲ್ನ ಸಂಜೀವಿನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ದಿನಗಳ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕೆಲವರನ್ನು ಕಳುಹಿಸಿಕೊಡಲಾಗಿತ್ತು. ಆದರೆ ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಇಬ್ಬರು ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
.ಹೊಸಪೇಟೆ: ‘ಕಣ್ಣುಮುಚ್ಚಿ’ ನೀಡಿದ್ದರೇ ಯುಡಿ ಐಡಿ?.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.