ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ | ವಾಂತಿ ಭೇದಿ: ನಲ್ಲಾಪುರ ಗ್ರಾಮಕ್ಕೆ ಸಿಇಒ ಭೇಟಿ

Published 25 ಮಾರ್ಚ್ 2024, 8:24 IST
Last Updated 25 ಮಾರ್ಚ್ 2024, 8:24 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ತಾಲ್ಲೂಕಿನ ಸೀತಾರಾಮ ತಾಂಡ ಗ್ರಾಮ ಪಂಚಾಯತಿ ವ್ಯಾಪ್ತಿಯ ನಲ್ಲಾಪುರ ಗ್ರಾಮದಲ್ಲಿ ವಾಂತಿ ಭೇದಿ ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು ಬಿ. ಭಾನುವಾರ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಸಿಇಒ ಅವರು ಗ್ರಾಮಸ್ಥರೊಂದಿಗೆ ಚರ್ಚಿಸಿದರು. ಸ್ಥಳದಲ್ಲಿ ಹಾಜರಿದ್ದ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಮಾತನಾಡಿ ಪ್ರಕರಣದ ಬಗ್ಗೆ ಮಾಹಿತಿ ಪಡೆದರು. ವಾಂತಿ ಭೇದಿ ಪ್ರಕರಣಗಳ ಬಗ್ಗೆ ತೀವ್ರ ನಿಗಾವಹಿಸಲು ಸೂಚಿಸಿದರು.

ತಾತ್ಕಾಲಿಕವಾಗಿ ಆಯುಷ್ ಇಲಾಖೆಯ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಲಾಗುತ್ತಿರುವುದನ್ನು ಸಿಇಒ ಅವರು ಇದೇ ವೇಳೆ ಪರಿಶೀಲಿಸಿದರು. ಅಲ್ಲಿನ ರೋಗಿಗಳೊಂದಿಗೆ ಮಾತನಾಡಿ ಅವರಿಗೆ ಧೈರ್ಯ ತುಂಬಿದರು.

ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಉಮೇಶ್ ಎಂ., ತಾಲ್ಲೂಕು ಆರೋಗ್ಯಾಧಿಕಾರಿ ಭಾಸ್ಕರ್ ಮತ್ತಿತರರು ಇದ್ದರು.

ಆಸ್ಪತ್ರೆಗೆ ದಾಖಲಾಗಿಲ್ಲ: ‘ಸುಮಾರು 12 ಮಂದಿಗೆ ವಾಂತಿ ಭೇದಿ ಕಾಣಿಸಿದೆ. ಇದು ಸಾಮೂಹಿಕ ಅಲ್ಲ. ಯಾರೂ ಆಸ್ಪತ್ರೆಗೆ ದಾಖಲಾಗಿಲ್ಲ. ಯಾವುದೇ ಆತಂಕ ಇಲ್ಲ. ಒಂದು ಕೊಳವೆಬಾವಿಯಿಂದ ನೇರವಾಗಿ ನೀರು ಕುಡಿಯುತ್ತಿದ್ದರು, ಅದನ್ನು ಸ್ಥಗಿತಗೊಳಿಸಲು ಸೂಚಿಸಲಾಗಿದೆ’ ಎಂದು ಸದಾಶಿವ ಪ್ರಭು ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT