ಭಾನುವಾರ, ಮಾರ್ಚ್ 26, 2023
25 °C

ತುಂಗಭದ್ರಾ ಜಲಾಶಯಕ್ಕೆ ರಾಜ್ಯಪಾಲರ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಅವರು ಸೋಮವಾರ ಸಂಜೆ ಇಲ್ಲಿನ ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿದರು.

ಜಲಾಶಯ ಆಡಳಿತ ಮಂಡಳಿ ಕಾರ್ಯದರ್ಶಿ ಜಿ. ನಾಗಮೋಹನ್‌ ಅವರು ಜಲಾಶಯಕ್ಕೆ ಸ್ವಾಗತಿಸಿ, ಸ್ಮರಣಿಕೆ ಕೊಟ್ಟು, ಅಣೆಕಟ್ಟೆ ಬಗ್ಗೆ ಮಾಹಿತಿ ನೀಡಿದರು. ಬಳಿಕ ರಾಜ್ಯಪಾಲರು ಅಣೆಕಟ್ಟೆ ಮೇಲೆ ಓಡಾಡಿ ಹಿನ್ನೀರಿನ ಸೊಬಗು ಕಣ್ತುಂಬಿಕೊಂಡರು.

ರಾಜ್ಯಪಾಲರು ಮಂಗಳವಾರ ಬಳ್ಳಾರಿಯ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ, ಹಂಪಿ ಕನ್ನಡ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲು ಬಂದಿದ್ದು, ಸೋಮವಾರ ರಾತ್ರಿ ಜಲಾಶಯದ ವೈಕುಂಠ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುವರು. ಭೇಟಿ ಹಿನ್ನೆಲೆಯಲ್ಲಿ ಜಲಾಶಯದ ಪರಿಸರದಲ್ಲಿ ಬಿಗಿ ಭದ್ರತೆ ಮಾಡಲಾಗಿದೆ. 

ಇದಕ್ಕೂ ಮುನ್ನ ವಿಜಯನಗರ ಜಿಲ್ಲೆಯ ಗಡಿಭಾಗದಲ್ಲಿ ರಾಜ್ಯಪಾಲರಿಗೆ ಜಿಲ್ಲಾಧಿಕಾರಿ ಅನಿರುದ್ಧ್‌ ಶ್ರವಣ್‌ ಪಿ., ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್‌ ಕೆ. ಅವರು ಹೂಗುಚ್ಛ ಕೊಟ್ಟು ಸ್ವಾಗತಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು