ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಳನೇ ವೇತನ ಆಯೋಗ ರಚನೆಗೆ ಆಗ್ರಹ

Last Updated 29 ಸೆಪ್ಟೆಂಬರ್ 2022, 17:11 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಏಳನೇ ವೇತನ ಆಯೋಗ ರಚಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ವಿವಿಧ ಸಂಘಟನೆಗಳ ಮತ್ತು ಇಲಾಖಾ ಹಾಗೂ ವೃಂದ ಸಂಘಗಳ ಜಂಟಿ ಕ್ರಿಯಾ ಸಮಿತಿಯವರು ಗುರುವಾರ ನಗರದ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಅನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೆಸರಿಗೆ ಬರೆದ ಮನವಿ ಪತ್ರ ಸಲ್ಲಿಸಿದರು. ಕೋವಿಡ್‌ ಸಮಯದಲ್ಲಿ ಮುಟ್ಟುಗೋಲು ಹಾಕಿಕೊಂಡಿರುವ ನೌಕರರ, ಪಿಂಚಣಿದಾರರ 18 ತಿಂಗಳ ಬಾಕಿ ತುಟ್ಟಿಭತ್ಯೆ ಬಿಡುಗಡೆಗೊಳಿಸಬೇಕು. 2022ರ ಜುಲೈನಿಂದ ಜಾರಿಗೆ ಬರುವಂತೆ ಶೇ.25 ರಷ್ಟು ಮಧ್ಯಂತರ ಪರಿಹಾರ ಘೋಷಿಸಬೇಕು. ನಿಶ್ಚಿತ ಪಿಂಚಣಿ ಪದ್ದತಿ ಮರು ಸ್ಥಾಪಿಸಬೇಕು. ಖಾಲಿಯಿರುವ 2.80ಲಕ್ಷ ಹುದ್ದೆಗಳನ್ನು ಭರ್ತಿ ಮಾಡಬೇಕು. ಕೇಂದ್ರ ಸರ್ಕಾರಿ ನೌಕರರಿಗಿರುವಂತೆ ರಾಜ್ಯದಲ್ಲಿಯೂ ಅಂಗವಿಕಲ ನೌಕರರಿಗೆ ಮುಂಬಡ್ತಿಯಲ್ಲಿ ಮೀಸಲಾತಿ ಕಲ್ಪಿಸಬೇಕೆಂದು ಒತ್ತಾಯಿಸಿದರು.

ಸಂಘದ ನಾಗರಾಜ ಪತ್ತಾರ, ದಯಾನಂದ ಕಿನ್ನಾಳ್‌ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT