ಸೋಮವಾರ, ಏಪ್ರಿಲ್ 12, 2021
29 °C

ತುಟ್ಟಿಭತ್ಯೆ ಬಿಡುಗಡೆಗೆ ಆಗ್ರಹಿಸಿ ಸರ್ಕಾರಿ ನೌಕರರಿಂದ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯನಗರ (ಹೊಸಪೇಟೆ): ತಡೆ ಹಿಡಿದಿರುವ 18 ತಿಂಗಳ ತುಟ್ಟಿಭತ್ಯೆ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದವರು ಶುಕ್ರವಾರ ಇಲ್ಲಿನ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನೂತನ ಪಿಂಚಣಿ ಯೋಜನೆ ರದ್ದುಗೊಳಿಸಿ, ನಿಶ್ಚಿತ ಪಿಂಚಣಿ ಎಲ್ಲರಿಗೂ ಅನ್ವಯವಾಗುವಂತೆ ಮರುಜಾರಿಗೊಳಿಸಬೇಕು. ಐದು ವರ್ಷಕ್ಕೊಮ್ಮೆ ವೇತನ ಆಯೋಗ ರಚಿಸಬೇಕು. ಹೊರಗುತ್ತಿಗೆ ನೌಕರರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಖಾಲಿ ಇರುವ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು.

ಒಕ್ಕೂಟದ ಜಿಲ್ಲಾ ಅಧ್ಯಕ್ಷ ನಾಗರಾಜ ಪತ್ತಾರ, ಜಿಲ್ಲಾ ಗೌರವ ಅಧ್ಯಕ್ಷ ತಾಯಪ್ಪ ನಾಯಕ, ಉಪಾಧ್ಯಕ್ಷ ದಯಾನಂದ ಕಿನ್ನಾಳ್‌, ತಾಲ್ಲೂಕು ಅಧ್ಯಕ್ಷ ಕಂಪ್ಲಿ ಚಂದ್ರಪ್ಪ, ಉಪಾಧ್ಯಕ್ಷ ಧರ್ಮನಗೌಡ, ವಿಷ್ಣು ನಾಯಕ, ಟಿ.ಎಂ. ಉಷಾರಾಣಿ, ಸುನೀತಾ ಅನ್ವೇಕರ್‌, ಟಿ. ಲೀಲಾ, ಗಾಯತ್ರಿ, ಎಂ.ಪಿ. ದೊಡ್ಡಮನಿ, ಜಂಬಯ್ಯ ನಾಯಕ, ಪಾರ್ವತಿ, ಟಿ. ಜಯಮ್ಮ, ಹನುಮಂತಪ್ಪ, ಶ್ರೀಹರಿ, ವೀಣಾ, ಜಿ.ಎಂ. ಅಶ್ವಿನಿ, ಸುಜಾತಾ, ಜೆ. ತಿಪ್ಪೇಸ್ವಾಮಿ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು