ಹೊಸಪೇಟೆ (ವಿಜಯನಗರ): ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ತೆರಿಗೆ ವಸೂಲಾತಿಯ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಬುಧವಾರ ವಿಶೇಷ ಅಭಿಯಾನ ನಡೆದಿದ್ದು, ಸಂಜೆ 6 ಗಂಟೆ ವೇಳೆಗೆ ನಿಗದಿತ ಗುರಿ ₹2 ಕೋಟಿ ಬದಲಿಗೆ ₹2.74 ಕೋಟಿ ಸಂಗ್ರಹವಾಗಿದೆ.

ಜಿಲ್ಲಾ ಪಂಚಾಯಿತಿ ಸಿಇಒ ನೊಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಷಾ ಅವರ ಮೇಲ್ವಿಚಾರಣೆಯಲ್ಲಿ ಈ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಲಾಗಿತ್ತು. ವಿಜಯನಗರ ಜಿಲ್ಲೆ ರಚನೆಯಾದ ಬಳಿಕ ಒಂದೇ ದಿನ ಸಂಗ್ರಹವಾದ ಗರಿಷ್ಠ ತೆರಿಗೆ ಪ್ರಮಾಣ ಇದಾಗಿದೆ. ಇದಕ್ಕೆ ಕಾರಣರಾದ ಎಲ್ಲಿರಿಗೂ ಸಿಇಒ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಮೇಲ್ವಿಚಾರಣೆ ಮತ್ತು ಭಾಗವಹಿಸಲು ಗ್ರಾಮ ಪಂಚಾಯಿತಿಗಳಿಗೆ ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳಾಗಿ ನೇಮಿಸಲಾಗಿತ್ತು. ಪ್ರತಿ ತಾಲ್ಲೂಕಿಗೆ ಜಿಲ್ಲಾ ಪಂಚಾಯಿತಿಯ ಹಿರಿಯ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.