ಹೊಸಪೇಟೆ (ವಿಜಯನಗರ): ಗ್ಯಾರಂಟಿ ಯೋಜನೆ ವಿರೋಧಿಸಿದ ಬಿಜೆಪಿಗರು ಇದೀಗ ನಮ್ಮನ್ನು ನಕಲು ಮಾಡುತ್ತಿದ್ದಾರೆ. ದೇಶಕ್ಕೆ ಇಂದು ಕರ್ನಾಟಕವೇ ಮಾದರಿ ರಾಜ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇಲ್ಲಿ ಮೇ 20ರಂದು ನಡೆಯಲಿರುವ ಸಾಧನಾ ಸಮಾವೇಶದ ಸಿದ್ಧತೆ ಪರಿಶೀಲನೆಗೆ ಶುಕ್ರವಾರ ನಗರಕ್ಕೆ ಬಂದಿದ್ದ ಅವರು ಪೆಂಡಾಲ್ನ ನಿರ್ಮಾಣ ಕಾಮಗಾರಿಗಳನ್ನು ವೀಕ್ಷಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

‘ಮೂಲಭೂತ ಅರ್ಥಿಕತೆ ಬಗ್ಗೆ ಬಿಜೆಪಿಯವರಿಗೆ ಗೊತ್ತಿಲ್ಲ. ಅಭಿವೃದ್ಧಿ ದುಡ್ಡಿಲ್ಲ ಎಂದು ಅವರು ಅರೋಪ ಮಾಡ್ತಿದ್ದಾರೆ. ಆದರೆ ಎಲ್ಲಾ ಕ್ಷೇತ್ರದಲ್ಲಿಯೂ ಅಭಿವೃದ್ಧಿಗೆ ಹಣ ಕೊಟ್ಟಿದ್ದೇವೆ. ಎರಡು ವರ್ಷದಲ್ಲಿ ₹90 ಸಾವಿರ ಕೋಟಿ ಹಣವನ್ನು ಗ್ಯಾರಂಟಿಗೆ ಮೀಸಲಿಟ್ಟಿದ್ದೇವೆ, ಗ್ಯಾರಂಟಿ ಜೊತೆಗೆ ಅಭಿವೃದ್ಧಿಗೂ ಕೋಟಿ ಕೋಟಿ ಹಣ ಬಿಡುಗಡೆ ಮಾಡಿದ್ದೇವೆ’ ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದರು.

‘ಗ್ಯಾರಂಟಿ ಯೋಜನೆಯಿಂದ ರಾಜ್ಯ ದಿವಾಳಿ ಆಗಿದ್ದರೆ, ಬೊಕ್ಕಸದಲ್ಲಿ ಹಣ ಇಲ್ಲದೆ ಇದ್ದರೆ ಇಷ್ಟೆಲ್ಲ ಅಭಿವೃದ್ಧಿ ಸಾಧ್ಯವಾಗುತ್ತಿತ್ತೇ? ಈ ಬಾರಿ ಬಜೆಟ್ ಗಾತ್ರ ₹38 ಸಾವಿರ ಕೋಟಿಯಷ್ಟು ಹೆಚ್ಚಳವಾಗಿದ್ದು ಹೇಗೆ?’ ಎಂದು ಅವರು ಪ್ರಶ್ನಿಸಿದರು.

‘ಕಲ್ಯಾಣ ಕರ್ನಾಟಕದ ಪ್ರದೇಶ ಅಭಿವೃದ್ಧಿ ಮಂಡಳಿಗೆ (ಕೆಕೆಆರ್ಡಿಬಿ) ₹ ಐದು ಸಾವಿರ ಕೋಟಿ ಕೊಟ್ಟಿದ್ದೇವೆ. ಚುನಾವಣೆ ವರ್ಷ ಇದೇ ಕೆಕೆಆರ್ಡಿಬಿಗೆ ಬೊಮ್ಮಾಯಿ ಅವರು ₹ ಮೂರು ಸಾವಿರ ಕೋಟಿ ನೀಡುವ ಘೋಷಣೆ ಮಾಡಿದರೇ ಹೊರತು ಬಿಡುಗಡೆ ಮಾಡಲಿಲ್ಲ. ಕಲ್ಯಾಣ ಕರ್ನಾಟಕ ಭಾಗಕ್ಕೆ ಕೇಂದ್ರ ಸರ್ಕಾರವೂ ಬಿಡಿಗಾಸು ನೀಡಿಲ್ಲ’ ಎಂದು ಮುಖ್ಯಮಂತ್ರಿ ಟೀಕಿಸಿದರು.

ಮನೆ ನೀಡಿರಲಿಲ್ಲ: ಬಿಜೆಪಿ ತನ್ನ ನಾಲ್ಕು ವರ್ಷದ ಅವಧಿಯಲ್ಲಿ ಒಂದೇ ಒಂದು ಮನೆ ನೀಡಿರಲಿಲ್ಲ. ಆದರೆ ನಾವು ಈಗಾಗಲೇ ಸಾವಿರಾರು ಮನೆಗಳನ್ನು ನೀಡಿದ್ದೇವೆ. ತಾಂಡಾ, ಹಟ್ಟಿ, ಕ್ಯಾಂಪ್ಗಳ ಒಂದು ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡುತ್ತಿದ್ದೇವೆ. ಸೇಡಂಗೆ ಬಂದ ಪ್ರಧಾನಿ ಮೋದಿ ಅವರು 50 ಸಾವಿರ ಕುಟುಂಬಗಳಿಗೆ ಹಕ್ಕುಪತ್ರ ಕೊಡುತ್ತೇವೆ ಎಂದರು, ಆದರೆ ಅದನ್ನು ಮಾಡಲಿಲ್ಲ’ ಎಂದು ಅವರು ಕುಟುಕಿದರು.

3 ಲಕ್ಷ ಮಂದಿ ಸೇರುವ ನಿರೀಕ್ಷೆ: ಇದು ಸರ್ಕಾರದ ಸಮರ್ಪಣಾ ಸಾಧನಾ ಸಮಾವೇಶ. ಇದರಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಮೂರು ಲಕ್ಷ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಇದೊಂದು ಸರ್ಕಾರಿ ಕಾರ್ಯಕ್ರಮ, ಹೀಗಾಗಿ ವಿರೋಧ ಪಕ್ಷದ ನಾಯಕರು ಸಹಿತ ಎಲ್ಲಾ ಶಾಸಕರಿಗೂ ಆಹ್ವಾನ ನೀಡಿದ್ದೇವೆ. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸಹಿತ ಎಐಸಿಸಿಯ ಹಲವು ನಾಯಕರು, ರಾಜ್ಯದ ಎಲ್ಲಾ ಸಚಿವರು ಪಾಲ್ಗೊಳ್ಳಲಿದ್ದಾರೆ ಎಂದು ಸಿಎಂ ಹೇಳಿದರು.

ಸಕ್ಕರೆ ಕಾರ್ಖಾನೆ ಘೋಷಣೆ: ಹೊಸಪೇಟೆಯಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆ ಸಂಬಂಧ ಸಾಧನಾ ಸಮಾವೇಶದ ದಿನವೇ ಘೋಷಣೆ ಮಾಡಲಾಗುವುದು ಎಂದು ಅವರು ಹೇಳಿದರು.

ಕಾಲ ಕೂಡಿ ಬಂದಾಗ ನಾಗೇಂದ್ರಗೆ ಸಚಿವ ಸ್ಥಾನ

ಸಚಿವ ಸಂಪುಟದಲ್ಲಿ ಈ ಮೊದಲು ಸಚಿವರಾಗಿದ್ದ ಬಿ.ನಾಗೇಂದ್ರ ಅವರನ್ನು ಸಚಿವ ಸ್ಥಾನಕ್ಕೆ ಮತ್ತೆ ಸೇರಿಸಿಕೊಳ್ಳುವ ಇಂಗಿತವವನ್ನು ಸಿಎಂ ಸಹ ವ್ಯಕ್ತಪಡಿಸಿದರು. ‘ನಾಗೇಂದ್ರ ಅವರನ್ನು ಸಚಿವರನ್ನಾಘಿ ಮಾಡ್ತೇವೆ, ಆದರೆ ಕಾಲ ಕೂಡಿ ಬರಬೇಕು’ ಎಂದ ಸಿದ್ದರಾಮಯ್ಯ ಅವರಿಗೆ ಪಕ್ಕದಲ್ಲೇ ಇದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಹ ದನಿಗೂಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.