ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ಪ್ರಜಾವಾಣಿ’ ವರದಿ ಫಲಶ್ರುತಿ: ಅತಿಥಿ ಉಪನ್ಯಾಸಕರಿಗೆ ಗೌರವ ಧನ ಬಿಡುಗಡೆ

Published : 4 ಸೆಪ್ಟೆಂಬರ್ 2022, 9:37 IST
ಫಾಲೋ ಮಾಡಿ
Comments

ಹೊಸಪೇಟೆ (ವಿಜಯನಗರ): ನಗರದ ಶಂಕರ್‌ ಆನಂದ್‌ ಸಿಂಗ್‌ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆರು ಜನ ಅತಿಥಿ ಉಪನ್ಯಾಸಕರಿಗೆ ಗೌರವ ಧನ ಬಿಡುಗಡೆ ಮಾಡಲಾಗಿದೆ.

‘ನಾವು ಆರು ಜನ ಅತಿಥಿ ಉಪನ್ಯಾಸಕರಿಗೆ ಮೂರು ತಿಂಗಳ ಗೌರವ ಧನದ ಪೈಕಿ ಎರಡು ತಿಂಗಳದ್ದು ಬಿಡುಗಡೆಗೊಳಿಸಿದ್ದಾರೆ. ನಮ್ಮ ಸಮಸ್ಯೆ ಸರ್ಕಾರದ ಗಮನಕ್ಕೆ ತಂದು, ಪರಿಹಾರ ಕೊಟ್ಟಿದ್ದಕ್ಕೆ ‘ಪ್ರಜಾವಾಣಿ’ಗೆ ಕೃತಜ್ಞತೆ ತಿಳಿಸುತ್ತೇನೆ’ ಎಂದು ಅತಿಥಿ ಉಪನ್ಯಾಸಕರಾದ ಅನುಷಾ ಹಿರೇಮಠ, ಗಿರೀಶಗೌಡ, ಮಂಜುನಾಥ ತಿಳಿಸಿದರು.

‘ಮೂರು ತಿಂಗಳಿಂದ ಸಿಗದ ಗೌರವ ಧನ’ ಶೀರ್ಷಿಕೆ ಅಡಿ ಆ. 26ರಂದು ‘ಪ್ರಜಾವಾಣಿ’ ವರದಿ ಪ್ರಕಟಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT