ಹೊಸಪೇಟೆ (ವಿಜಯನಗರ): ಅತಿಥಿ ಉಪನ್ಯಾಸಕರಿಗೆ ಕೋವಿಡ್ ಪರಿಹಾರ ಪ್ಯಾಕೇಜ್ ಘೋಷಿಸಿ ಸರ್ಕಾರ ಅವರ ನೆರವಿಗೆ ಧಾವಿಸಬೇಕು. ಸೇವಾ ಭದ್ರತೆ ಒದಗಿಸುವುದು ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿಯ ಪದಾಧಿಕಾರಿಗಳು ಗುರುವಾರ ಆನ್ಲೈನ್ನಲ್ಲಿ ಪ್ರತಿಭಟನೆ ನಡೆಸಿದರು.

ಆನ್ಲೈನ್ನಲ್ಲಿ ನಡೆದ ಪ್ರತಿಭಟನೆಗೆ ಹೊಸಪೇಟೆ, ಹಗರಿಬೊಮ್ಮನಹಳ್ಳಿ, ಸಂಡೂರು, ಹೂವಿನಹಡಗಲಿ, ಕಂಪ್ಲಿ, ಕೂಡ್ಲಿಗಿ ತಾಲ್ಲೂಕಿನ ಅತಿಥಿ ಉಪನ್ಯಾಸಕರು ಕೈಜೋಡಿಸಿ, ಪಾಲ್ಗೊಂಡಿದ್ದರು.

’ರಾಜ್ಯವ್ಯಾಪಿ 14,500 ಅತಿಥಿ ಉಪನ್ಯಾಸಕರು 413 ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೋವಿಡ್ ಲಾಕ್ಡೌನ್ ಹಾಗೂ ಹಿಂದಿನ ಸೆಮಿಸ್ಟರ್ನಲ್ಲಿ ಕಡಿಮೆ ಅವಧಿಗೆ ಅತಿಥಿ ಉಪನ್ಯಾಸಕರನ್ನು ಸೇವೆಗೆ ನಿಯೋಜಿಸಿದ್ದರಿಂದ, ಸೂಕ್ತ ವೇತನ ಸಿಗದೇ ಸಮಸ್ಯೆಗೆ ಸಿಲುಕಿದ್ದಾರೆ. ಆರ್ಥಿಕ ಮುಗ್ಗಟ್ಟಿನಿಂದ ಅವರ ಕುಟುಂಬ ವರ್ಗದವರಿಗೆ ತೊಂದರೆ ಆಗುತ್ತಿದೆ. ಕೆಲವರು ಕೋವಿಡ್ನಿಂದ ಮೃತಪಟ್ಟಿದ್ದಾರೆ’ ಎಂದು ತಿಳಿಸಿದ್ದಾರೆ.

‘ಅನೇಕ ಜನ ಅತಿಥಿ ಉಪನ್ಯಾಸಕರು ಹಣ್ಣು-ಹಂಪಲು, ತರಕಾರಿ ಮಾರುತ್ತ ಜೀವನ ಸಾಗಿಸುತ್ತಿದ್ದಾರೆ. ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿದ್ದಾರೆ. ಆರ್ಥಿಕ ಹೊರೆಯ ಜೊತೆಯಲ್ಲಿ ಮಾನಸಿಕ ಒತ್ತಡವೂ ಅವರನ್ನು ತೀವ್ರವಾಗಿ ಕುಗ್ಗಿಸಿದೆ. ಅತಿಥಿ ಉಪನ್ಯಾಸಕರ ಸಂಕಷ್ಟವನ್ನು ಅರಿತು ಸರ್ಕಾರವು ಅವರ ಐದು ತಿಂಗಳ ಬಾಕಿ ವೇತನ ಬಿಡುಗಡೆ ಮಾಡಿರುವುದು ಶ್ಲಾಘನಾರ್ಹ’ ಎಂದು ಹೇಳಿದ್ದಾರೆ.

‘2020-21ನೇ ಸಾಲಿನ ಪದವಿ ತರಗತಿಗಳು ಪ್ರಾರಂಭವಾದಾಗ ಇಲಾಖೆ ಕೇವಲ ಶೇ 50ರಷ್ಟು ಅತಿಥಿ ಉಪನ್ಯಾಸಕರನ್ನು ಸೇವೆಗೆ ನಿಯೋಜಿಸಿತ್ತು. ನಂತರ ಆಗ್ರಹದ ಮೇರೆಗೆ ಎಲ್ಲರನ್ನೂ ಸೇವೆಗೆ ಸೇರಿಸಿಕೊಂಡಿತ್ತು. ಆನ್ಲೈನ್ ತರಗತಿ ನಡೆಸಲು ಅತಿಥಿ ಉಪನ್ಯಾಸಕರ ಸೇವೆ ಬಳಸಿಕೊಳ್ಳಲು ಕಾಲೇಜು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಆದರೆ, ಅತಿಥಿ ಉಪನ್ಯಾಸಕರನ್ನು ಈವರೆಗೂ ಸೇವೆಗೆ ಸೇರಿಸಿಕೊಂಡಿಲ್ಲ. ಈ ನಿಟ್ಟಿನಲ್ಲಿ ಸರ್ಕಾರ ಗಮನಹರಿಸಿ ಸಮಸ್ಯೆ ದೂರವಾಗಿಸಬೇಕು’ ಎಂದು ಹಕ್ಕೊತ್ತಾಯ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.