ಗುರುವಾರ , ಜುಲೈ 7, 2022
25 °C

ವಿಜಯನಗರ: ಜಿಮ್ ಟ್ರೈನರ್ ಧನ್ಯಕುಮಾರ್ ಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ಅರಸೀಕೆರೆ (ವಿಜಯನಗರ ಜಿಲ್ಲೆ): ಇಲ್ಲಿನ ಬೇವಿನಹಳ್ಳಿ ದೊಡ್ಡ ತಾಂಡದ ಬಳಿ ಬುಧವಾರ ರಾತ್ರಿ ಜಿಮ್ ಟ್ರೈನರ್ ಒಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ದಾವಣಗೆರೆ ನಗರದ ನಿಟ್ಟುವಳ್ಳಿ ವಾಸಿ ಧನ್ಯಕುಮಾರ್ (31) ಹತ್ಯೆಗೀಡಾದ ಯುವಕ.

ಬುಧವಾರ ಸ್ನೇಹಿತರೊಂದಿಗೆ ಉಚ್ಚಂಗಿದುರ್ಗ ತೋಪಿಗೆ ಬಾಡೂಟಕ್ಕೆ ಬಂದಿದ್ದರು. ಮಾಹಿತಿ ಪಡೆದ ಮತ್ತೊಂದು ಗುಂಪು ಉಪಾಯದಿಂದ ಕರೆಯಿಸಿಕೊಂಡು ಚಾಕುವಿನಿಂದ ಇರಿದು ಕೊಲೆ ಮಾಡಿದೆ. ಪಟ್ಟಣದ ಜಿಮ್ ಟ್ರೈನಿಂಗ್ ಸೆಂಟರ್ ನಲ್ಲಿ ತರಬೇತುದಾರರಾಗಿದ್ದರು. ದೇಹದಾರ್ಢ್ಯ ಪಟುವಾಗಿದ್ದ ಅವರು ಅನೇಕ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿದ್ದರು.

ಸ್ಥಳಕ್ಕೆ ಹರಪನಹಳ್ಳಿ ಡಿ.ವೈ.ಎಸ್.ಪಿ ಹಾಲಮೂರ್ತಿ ರಾವ್, ಸಿಪಿಐ ನಾಗರಾಜ ಕಮ್ಮಾರ್, ಅರಸೀಕೆರೆ ಸಬ್ ಇನ್ಸ್ಪೆಕ್ಟರ್ ಪ್ರಶಾಂತ್, ನಾಗರತ್ನ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು