ಹಗರಿಬೊಮ್ಮನಹಳ್ಳಿ: ತಾಲ್ಲೂಕಿನ ಅಂಗನವಾಡಿ ಕೇಂದ್ರಗಳ ವಿದ್ಯುತ್ ಬಿಲ್ ಅನ್ನು ಗೃಹ ಜ್ಯೋತಿ ಯೋಜನೆಯಡಿ ಪಾವತಿಸಲು ಸಭೆ ಅನುಮೋದಿಸುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬೋರೇಗೌಡ ಮನವಿ ಮಾಡಿದರು.

ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.

ಅಧ್ಯಕ್ಷ ಸೊನ್ನದ ಗುರುಬಸವರಾಜ ಪ್ರತಿಕ್ರಿಯಿಸಿ ‘ಈ ಕುರಿತು ಜಿಲ್ಲಾ ಸಮಿತಿಯ ಗಮನಕ್ಕೆ ತಂದು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು. ಗೃಹಲಕ್ಷ್ಮೀ ಯೋಜನೆಯಡಿ ತಾಲ್ಲೂಕಿನಲ್ಲಿ ಒಟ್ಟು 40,569 ಪಡಿತರ ಚೀಟಿಗಳಿದ್ದು, 40,490 ಫಲಾನುಭವಿಗಳು ನೋಂದಣಿ ಮಾಡಿಸಿದ್ದಾರೆ’ ಎಂದರು.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿ ಕೆ.ಸಂತೋಷ ನಾಯ್ಕ ಮಾತನಾಡಿ, ‘ಸರ್ಕಾರಿ ಬಸ್ ಮೇಲೆ ಹಾಕಲಾಗಿದ್ದ ತಂಬಾಕು ಗುಟ್ಕಾ ಜಾಹೀರಾತುಗಳನ್ನು ತೆರವುಗೊಳಿಸಲಾಗಿದೆ. ಪ್ರಯಾಣಿಕರೊಂದಿಗೆ ಚಾಲಕರು ಹಾಗೂ ನಿರ್ವಾಹಕರು ಸೌಜನ್ಯದಿಂದ ವರ್ತಿಸುವಂತೆ ವಾರಕ್ಕೊಮ್ಮೆ ಸಭೆ ನಡೆಸಲಾಗುತ್ತಿದೆ’ ಎಂದು ತಿಳಿಸಿದರು.

ಜಿಲ್ಲಾ ಸಮಿತಿ ಉಪಾಧ್ಯಕ್ಷ ಎಚ್.ಜಂದೀಸಾಹೇಬ್ ಮಾತನಾಡಿ, ‘ಬಸ್ ನಿಲ್ದಾಣ ಮತ್ತು ಘಟಕಕ್ಕೆ ಅಗತ್ಯವಾದ ಮೂಲಸೌಕರ್ಯಗಳ ಕುರಿತು ಮಾಹಿತಿ ನೀಡಿದರೆ ಜಿಲ್ಲಾ ಸಮಿತಿಯಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ಘಟಕ ಅಧಿಕಾರಿ ಕೆ.ಸಂತೋಷ್ ನಾಯ್ಕ ಮಾತನಾಡಿ, ‘78 ಬಸ್ಗಳ ಪೈಕಿ 20 ಬಸ್ಗಳು ದುರಸ್ತಿಗೆ ಬರುತ್ತಿವೆ. ಸಿಬ್ಬಂದಿ ಹಾಗೂ ಹೆಚ್ಚುವರಿ ಬಸ್ಗಳ ಅಗತ್ಯವಿದೆ. ಮುಂದಿನ ದಿನಗಳಲ್ಲಿ ಹಂಪಸಾಗರದಿಂದ ಬೆಂಗಳೂರಿಗೆ ಬಸ್ ಸೇವೆ ಆರಂಭಿಸುವ ಯೋಜನೆ ರೂಪಿಸಲಾಗಿದೆ ಎಂದು ಮಾಹಿತಿ ನೀಡಿದರು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ನಿರೀಕ್ಷಕಿ ಮಮತಾ ಜಿ. ಹಿರೇಮಠ ಮಾತನಾಡಿ, ‘ತಾಲ್ಲೂಕಿನಲ್ಲಿ 43 ನ್ಯಾಯಬೆಲೆ ಅಂಗಡಿಗಳ ಮೂಲಕ ಅರ್ಹ ಫಲಾನುಭವಿಗಳಿಗೆ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಸಮರ್ಪಕವಾಗಿ ವಿತರಿಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.

ಸರ್ವರ್ ಸಮಸ್ಯೆಯಿಂದಾಗಿ ಪಡಿತರ ವಿತರಣೆ ವಿಳಂಬವಾಗುತ್ತಿದೆ. ಪ್ರತಿ ತಿಂಗಳು ಮೊದಲ ವಾರದೊಳಗೆ ನ್ಯಾಯಬೆಲೆ ಅಂಗಡಿಗಳಿಗೆ ಪಡಿತರ ಸರಬರಾಜು ಮಾಡಿದರೆ ಎಲ್ಲ ಫಲಾನಭವಿಗಳಿಗೂ ನಿಗದಿತ ಅವಧಿಯೊಳಗೆ ವಿತರಿಸಲು ಸಾಧ್ಯವಾಗುತ್ತದೆ ಎಂದು ನ್ಯಾಯಬೆಲೆ ಅಂಗಡಿಗಳ ಒಕ್ಕೂಟದ ಅಧ್ಯಕ್ಷ ಕೆ.ಎಂ. ರವಿಕುಮಾರ ತಿಳಿಸಿದರು.

ಜೆಸ್ಕಾಂ ಇಲಾಖೆಯ ಮೇಲ್ವಿಚಾರಕಿ ಅನುಪಮಾ ಇಲಾಖೆಯ ಮಾಹಿತಿ ನೀಡಿದರು. ಸದಸ್ಯರಾದ ಗೌರಜ್ಜನವರ ಗಿರೀಶ್, ಸಂತೋಷ್, ತಾಲ್ಲೂಕು ಪಂಚಾಯಿತಿ ಇಒ ಪಾಲಯ್ಯನಕೋಟೆ ವಿಶ್ವನಾಥ ಮಾತನಾಡಿದರು. ಸದಸ್ಯರಾದ ಕೆ.ನಾಗಮ್ಮ ಗೋಣಿಬಸಪ್ಪ, ಉಲವತ್ತಿ ರಾಘವೇಂದ್ರ, ಮೇಟಿ ಮಂಜುನಾಥ್, ಸುಧಾ ಉಮೇಶ್ ಗೌಡ, ವೆಂಕಟೇಶ ನಾಯ್ಕ, ಪ್ರಕಾಶ ಉಪ್ಪಾರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-25-1189414237

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.