ಹಗರಿಬೊಮ್ಮನಹಳ್ಳಿ: ತಾಲ್ಲೂಕಿನ ವಿದ್ಯಾರ್ಥಿಗಳ ಕಲಿಕೆಗೆ ಅನುಗುಣವಾಗಿ ಪ್ರತಿ ವಿದ್ಯಾರ್ಥಿಗೆ ಕಲಿಕಾ ತಂತ್ರಗಳನ್ನು ರೂಪಿಸಿ ನಿರಂತರ ಕಲಿಕೆಯನ್ನು ಅನುಕೂಲಗೊಳಿಸಲು ಕ್ರಿಯಾಯೋಜನೆಯನ್ನು ರೂಪಿಸಿರುವುದು ಅಭಿನಂದನೀಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಎಸ್.ಜಗದೀಶ್ ಹೇಳಿದರು.

ಇಲ್ಲಿನ ಕ್ಷೇತ್ರ ಸಮನ್ವಯಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಸೇತುಬಂಧದ ಪ್ರಶ್ನೆ ಪತ್ರಿಕೆಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಶಾಲಾ ಪ್ರಾರಂಭ ಹಂತದಲ್ಲಿನ ‘ಸೇತುಬಂಧ’ ಯೋಜನೆಯನ್ನು ಇನ್ನಷ್ಟು ಪರಿಣಾಮಕಾರಿ ಹಾಗೂ ಏಕರೂಪವಾಗಿ ರೂಪಿಸುವ ಮೂಲಕ ತಾಲ್ಲೂಕಿನಲ್ಲಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ‘ಹೊಸ ದಿಕ್ಕು, ನವ ಹೆಜ್ಜೆ’ ಯೋಜನೆ ಅಡಿಯಲ್ಲಿ ಸೇತುಬಂಧದ ಕಲಿಕಾಂಶದ ಆಧಾರದಲ್ಲಿ ಪ್ರಶ್ನೆಪತ್ರಿಕೆಗಳನ್ನು ರೂಪಿಸಲಾಗಿದೆ ಎಂದರು.

ಸೇತುಬಂಧವು ಹಿಂದಿನ ತರಗತಿಯ ಕಲಿಕಾಫಲ ಮತ್ತು ಮುಂದಿನ ತರಗತಿಯ ಕಲಿಕಾ ಸಾಮರ್ಥ್ಯಗಳ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತದೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲಿಯೇ ವಿನೂತನವಾದ 4 ರಿಂದ 8ನೇ ತರಗತಿಯ ಮಕ್ಕಳಿಗಾಗಿ, ತಾಲ್ಲೂಕಿನ ನುರಿತ ಸಂಪನ್ಮೂಲ ವ್ಯಕ್ತಿಗಳು ಮತ್ತು ಎಲ್ಲ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಸೇತುಬಂಧದ ನೈದಾನಿಕ ಹಾಗೂ ಸಾಪಲ್ಯ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಲಾಗಿದೆ. ಇದು ತಾಲ್ಲೂಕಿನ ಎಲ್ಲ ಶಾಲೆಗಳ ಶಿಕ್ಷಕರಿಗೆ ಉಪಯುಕ್ತವಾಗುವುದರೊಂದಿಗೆ ಶೈಕ್ಷಣಿಕ ರಂಗದಲ್ಲಿ ಹೊಸ ಮೈಲುಗಲ್ಲಾಗಿದೆ ಎಂದು ಆಶಿಸಿದರು.

ಕ್ಷೇತ್ರ ಸಮನ್ವಾಧಿಕಾರಿ ಎಂ.ಎಸ್.ಪ್ರಭಾಕರ್ ಮಾತನಾಡಿ, ಸಂವಿಧಾನದ ಮೂಲ ಆಶಯಗಳಾದ ‘ಸಾರ್ವತ್ರಿಕ ಅವಕಾಶ, ಸಾರ್ವತ್ರಿಕ ದಾಖಲಾತಿ, ಸಾರ್ವತ್ರಿಕ ಉಳಿಕೆ ಮತ್ತು ಸಾರ್ವತ್ರಿಕ ಕಲಿಕೆ’ ಎನ್ನುವ ಇಲಾಖೆಯ ಯೋಜನೆಗೆ ಕಲಿಕಾ ಅವಕಾಶ, ಕಲಿಕಾರ್ಥಿಯ ಅನುಭವ, ಪೂರ್ವಜ್ಞಾನ, ವೈಯಕ್ತಿಕ ವಿಭಿನ್ನತೆ ಮುಂತಾದ ಕಾರಣಗಳಿಂದ ಮಕ್ಕಳಲ್ಲಿ ಕಲಿಕಾ ಮಟ್ಟದಲ್ಲಿ ಕೊರತೆಗಳು ಕಂಡುಬರುತ್ತಿವೆ. ಆದ್ದರಿಂದ ಸಮಗ್ರ ಮೌಲ್ಯಮಾಪನದ ಮೂಲಕ ಮಗುವಿನ ಕಲಿಕೆಯ ಮಟ್ಟವನ್ನು ಗುರುತಿಸಿ, ಕೊರತೆಗಳಿದ್ದಲ್ಲಿ ಅವುಗಳನ್ನು ನಿವಾರಿಸುತ್ತಾ ಮುಂದಿನ ತರಗತಿಗೆ ಸನ್ನದ್ಧಗೊಳಿಸುವ ಕಾರ್ಯವನ್ನು ನಾವು ನಿರಂತರವಾಗಿ ಕೈಗೊಳ್ಳುವ ಪ್ರಕ್ರಿಯೆ ನಿರಂತರವಾಗಿ ಸಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಯ ಮಾದರಿಯಲ್ಲಿ 6 ರಿಂದ 8ನೇ ತರಗತಿ ವಿದ್ಯಾರ್ಥಿಗಳನ್ನು ಕೇಂದ್ರವಾಗಿಟ್ಟುಕೊಂಡು ಎಲ್ಲ ವಿಷಯಗಳ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಿ ಕಲಿಕೆಯನ್ನು ದೃಢೀಕರಿಸುವ ಪ್ರಯತ್ನದಲ್ಲಿ ಯಶಸ್ಸು ಕಂಡಿದ್ದೇವೆ. ಆ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆ ಮುಂದಕ್ಕೆ ಸಾಗಿದ್ದೇವೆ ಎಂದರು.

ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಎಂ.ಪಿ.ಎಂ ಮಂಜುನಾಥ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಲ್.ರವಿಚಂದ್ರನಾಯ್ಕ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹ್ಯಾಟಿ ಲೋಕಪ್ಪ, ಕಾರ್ಯದರ್ಶಿ ಬಿ.ಕೊಟ್ರಪ್ಪ, ಚಂದ್ರಪ್ಪ, ಕೆ.ಗಾಳೆಪ್ಪ, ಸಂಪನ್ಮೂಲ ವ್ಯಕ್ತಿ ಎಸ್.ಕೊಟ್ರೇಶ್, ಎಪಿಎಫ್ ನ ಸಂತೋಷ್, ಯೋಜನೆಯ ಉಸ್ತುವಾರಿ ಪರಮೇಶ್ವರಯ್ಯ ಸೊಪ್ಪಿಮಠ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-25-408757121

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.