ಹಗರಿಬೊಮ್ಮನಹಳ್ಳಿ: ತಾಲ್ಲೂಕಿನ ಕನ್ನಿಹಳ್ಳಿ ಗ್ರಾಮದಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಹಾಗೂ ಮಲ್ಲಿಕಾರ್ಜುನ ಸ್ವಾಮಿ ರಥೋತ್ಸವ ನಿಮಿತ್ತ ಭಾನುವಾರ ಉಚಿತ ಸಾಮೂಹಿಕ ವಿವಾಹ ಜರುಗಿತು.

ಶಾಸಕ ಕೆ.ನೇಮರಾಜನಾಯ್ಕ ಕಾರ್ಯಕ್ರಮ ಉದ್ಘಾಟಿಸಿ, ‘ಸಾಮೂಹಿಕ ವಿವಾಹಗಳಿಂದ ಬಡ ಕುಟುಂಬಗಳಿಗೆ ಆರ್ಥಿಕ ಹೊರೆ ಕಡಿಮೆಯಾಗಲಿದೆ. ಬಡವರಿಗೆ ನೆರವಾಗುವ ಮೂಲಕ ಉಚಿತ ವಿವಾಹಗಳನ್ನು ಹಮ್ಮಿಕೊಂಡಿರುವ ಸಮಿತಿ ಕಾರ್ಯ ಶ್ಲಾಘನೀಯ’ ಎಂದರು.

ಗ್ರಾಮದಲ್ಲಿ ಅಂದಾಜು ₹3.5 ಕೋಟಿ ವೆಚ್ಚದಲ್ಲಿ ರಸ್ತೆ, ಚರಂಡಿ ಸೇರಿದಂತೆ ಮೂಲ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಅಂದಾಜು ₹60 ಕೋಟಿ ಅನುದಾನದಲ್ಲಿ ತಾಲ್ಲೂಕಿನಲ್ಲಿರುವ ರಸ್ತೆಗಳನ್ನು ದುರಸ್ತಿಗೊಳಿಸಲಾಗುವುದು ಎಂದರು.

ನಂದಿಪುರದ ಮಹೇಶ್ವರ ಸ್ವಾಮೀಜಿ, ಹಂಪಸಾಗರದ ನವಲಿ ಹಿರೇಮಠದ ಅಭಿನವ ಶಿವಲಿಂಗರುದ್ರಮುನಿ ಸ್ವಾಮೀಜಿ, ಹಾಲಸಿದ್ಧೇಶ್ವರ ಸ್ವಾಮೀಜಿ, ಉತ್ತಂಗಿಯ ಸೋಮಶಂಕರ ಸ್ವಾಮೀಜಿ, ಮಲ್ಲಿಕಾರ್ಜುನ ಸ್ವಾಮೀಜಿ, ಹೂವಿನಹಡಗಲಿಯ ಹಿರಿಶಾಂತವೀರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಈ ವೇಳೆ 18 ಜೋಡಿಗಳ ವಿವಾಹ ಜರುಗಿತು. ಕಳೆದ 9 ದಿನಗಳಿಂದ ಹೇಮರಡ್ಡಿ ಮಲ್ಲಮ್ಮ ಪುರಾಣ ಪ್ರವಚನ

ಹೇಮರಡ್ಡಿ ಮಲ್ಲಮ್ಮ ಪುರಾಣ ಸೇವಾ ಸಮಿತಿ ಅಧ್ಯಕ್ಷ ಎ.ಟಿ. ಹನುಮನಗೌಡ ಅಧ್ಯಕ್ಷತೆ ವಹಿಸಿದ್ದರು. ರೆಡ್ಡಿ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಬಸವರೆಡ್ಡಿ, ಹೂವಿನಹಡಗಲಿಯ ಸಿ.ಮೋಹನರೆಡ್ಡಿ, ಕೊಟ್ಟೂರಿನ ಕೆ.ಭರಮರೆಡ್ಡಿ, ಗದ್ದಿಕೆರೆಯ ತಿಪ್ಪಾರೆಡ್ಡಿ ಮಂಜುನಾಥ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಕೆ.ಬಸವರೆಡ್ಡಿ, ಉಲುವತ್ತಿ ಪಿಕೆಪಿಎಸ್ ಅಧ್ಯಕ್ಷ ಕನ್ನಿಹಳ್ಳಿ ಚಂದ್ರಶೇಖರ್, ತಳಕಲ್ಲು ಪ್ರಭಾಕರ, ರೆಡ್ಡಿ ನೌಕರರ ಸಂಘದ ಅಶೋಕರೆಡ್ಡಿ, ಮುಖಂಡ ಕೆ.ವಸಂತಕುಮಾರ, ಎಂ.ರಾಮಪ್ಪ, ಬೆಟ್ಟನಗೌಡ್ರ ಮೋಹನರೆಡ್ಡಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-25-1370058726

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.