ಹಗರಿಬೊಮ್ಮನಹಳ್ಳಿ: ತಾಲ್ಲೂಕಿನಲ್ಲಿ ಗ್ರಾಮೀಣ ರಸ್ತೆಗಳನ್ನು ಶೀಘ್ರ ದುರಸ್ತಿ ಮಾಡುವಂತೆ ಆಗ್ರಹಿಸಿ ಕೆಆರ್ಎಸ್ ಪಕ್ಷದ ಮುಖಂಡರು ತಂಬ್ರಹಳ್ಳಿಯಿಂದ ಪಟ್ಟಣದವರೆಗೂ ಬೈಕ್ ರ್ಯಾಲಿ ನಡೆಸಿ ಪ್ರತಿಭಟನೆ ನಡೆಸಿದರು.

ಪಕ್ಷದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಘಟಕದ ಅಧ್ಯಕ್ಷ ಪ.ಯ. ಗಣೇಶ್ ಮಾತನಾಡಿ, ‘ಪಟ್ಟಣದಿಂದ ಹೋಬಳಿ ಕೇಂದ್ರವಾದ ತಂಬ್ರಹಳ್ಳಿವರೆಗೂ ಅಂದಾಜು 17 ಕಿ.ಮೀ ರಸ್ತೆ ಸಂಪೂರ್ಣ ಹದಗೆಟ್ಟಿದೆ. ರಸ್ತೆಯ ತುಂಬೆಲ್ಲಾ ತಗ್ಗು ಗುಂಡಿಗಳು ಬಿದ್ದಿವೆ. ವಾಹನ ಸವಾರರು ಪ್ರಾಣವನ್ನು ಕೈಯಲ್ಲಿ ಹಿಡಿದುಕೊಂಡೇ ಓಡಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದರು.

ತಾಲ್ಲೂಕಿನಲ್ಲಿರುವ ಎಲ್ಲ ಗ್ರಾಮೀಣ ರಸ್ತೆಗಳ ಸ್ಥಿತಿ ಇದಾಗಿದ್ದು, ಕೂಡಲೇ ತಾಲ್ಲೂಕು ಆಡಳಿತ ಮತ್ತು ಜನಪ್ರತಿನಿಧಿಗಳು ಗಮನ ಹರಿಸಿ ರಸ್ತೆ ದುರಸ್ತಿಗೆ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.

ಜಿಲ್ಲಾ ಕಾರ್ಯದರ್ಶಿ ಹರಕುಣಿ ಗಣೇಶ್, ತಾಲ್ಲೂಕು ಘಟಕದ ಅಧ್ಯಕ್ಷ ಗುರುವಸವರಾಜ, ಉಪಾಧ್ಯಕ್ಷ ಪಾಂಡುರಂಗ ಮಾತನಾಡಿದರು. ಬಳಿಕ ತಹಶೀಲ್ದಾರ್ ಗೆ ಮನವಿ ಸಲ್ಲಿಸಿದರು. ಪಕ್ಷದ 50ಕ್ಕೂ ಹೆಚ್ಚು ಜನ ಮುಖಂಡರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-25-1784725901

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.