ಮಂಗಳವಾರ, ಜನವರಿ 25, 2022
28 °C

ಮೂವರು ವಿದ್ಯಾರ್ಥಿಗಳಿಗೆ ಕೋವಿಡ್: ಹಗರಿಬೊಮ್ಮನಹಳ್ಳಿಯ ಶಾಲೆ ಬಂದ್ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಗರಿಬೊಮ್ಮನಹಳ್ಳಿ: ಪಟ್ಟಣದ  ಹಳೇ ಊರಿನ ಪಾಪುಸ್ವಾಮಿ ಸರ್ಕಾರಿ ಪ್ರೌಢಶಾಲೆಯ ಮೂರು ಜನ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಶಾಲೆಯನ್ನು ಸಂಪೂರ್ಣ ಮುಚ್ಚಲಾಗಿದ್ದು, ಸೋಮವಾರದಿಂದ ರಜೆ ಘೋಷಿಸಲಾಗಿದೆ.

ಎಂಟನೆಯ ತರಗತಿಯ ಇಬ್ಬರು ಮತ್ತು 9ನೇ ತರಗತಿಯ ಒಬ್ಬ ವಿದ್ಯಾರ್ಥಿಗೆ ಸೋಂಕು ತಗುಲಿದೆ. ಡಿ.31 ರಂದು ಎಲ್ಲ ವಿದ್ಯಾರ್ಥಿಗಳಿಗೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ನಡೆಸಲಾಗಿದ್ದು ಸೋಂಕು ತಗುಲಿರುವುದು ಗೊತ್ತಾಗಿದೆ.

ಮಾತು ಬದಲಿಸಿದ ವೈದ್ಯಾಧಿಕಾರಿ: ವಿದ್ಯಾರ್ಥಿಗಳಿಗೆ ಶಂಕಿತ ಒಮೈಕ್ರಾನ್ ಗುಣಲಕ್ಷಣಗಳು ಇರುವುದಾಗಿ ಹೇಳಿದ್ದ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಶಿವರಾಜ್ ಬಳಿಕ ಮೂರು ಜನ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ತಗುಲಿದೆ, ಓಮೈಕ್ರಾನ್ ಅಲ್ಲ ಎಂದು ಸ್ಪಷ್ಟನೆ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು