ಹಗರಿಬೊಮ್ಮನಹಳ್ಳಿ: ತಾಲ್ಲೂಕಿನಲ್ಲಿರುವ ಮೊರಾರ್ಜಿ ದೇಸಾಯಿ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಲ್ಲಿ ವಿಶೇಷ ಮೀಸಲಾತಿ ಅಡಿಯಲ್ಲಿ ಪ್ರವೇಶ ಪಡೆಯಲು ನಕಲಿ ಪ್ರಮಾಣಪತ್ರಗಳನ್ನು ಈ ವರ್ಷವೂ ಸಲ್ಲಿಸಲಾಗಿದೆ ಎನ್ನುವ ದೂರುಗಳು ಕೇಳಿಬಂದಿವೆ. ಇದರಿಂದಾಗಿ ಅರ್ಹತೆ ಇರುವ ವಿದ್ಯಾರ್ಥಿಗಳು ವಂಚಿತರಾಗುವ ಭೀತಿ ಎದುರಾಗಿದೆ.

ತಾಲ್ಲೂಕಿನ ವಲ್ಲಭಾಪುರ, ಹಂಪಸಾಗರ, ಉಪನಾಯಕನಹಳ್ಳಿಯಲ್ಲಿ ಹಾಗೂ ಪಟ್ಟಣದಲ್ಲಿರುವ ಅಂಬಳಿಯ ತಲಾ ಒಂದೊಂದು ಮೊರಾರ್ಜಿ ವಸತಿ ಶಾಲೆ ಮತ್ತು ವರಲಹಳ್ಳಿಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಸೇರಿ ಒಟ್ಟು ಐದು ವಸತಿ ಶಾಲೆಗಳು ಇವೆ. ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಹಿಂದುಗಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿವೆ.

ಪ್ರತಿ ವರ್ಷವೂ 6ನೇ ತರಗತಿಗೆ ಪ್ರವೇಶ ಪರೀಕ್ಷೆಯ ಮೂಲಕ ಪ್ರತಿ ವಸತಿ ಶಾಲೆಗೆ 50 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿತ್ತು. ಆದರೆ ಕಳೆದ ವರ್ಷದಿಂದ 25 ವಿದ್ಯಾರ್ಥಿಗಳನ್ನು ಪ್ರವೇಶ ಪರೀಕ್ಷೆ ಮೂಲಕ ಇನ್ನುಳಿದ 25 ವಿದ್ಯಾರ್ಥಿಗಳನ್ನು ವಿಶೇಷ ಮೀಸಲಾತಿ ಅಡಿಯಲ್ಲಿ ನೇರವಾಗಿ ದಾಖಲಿಸಿಕೊಳ್ಳುವುದಕ್ಕೆ ಸರ್ಕಾರ ಅವಕಾಶ ಕಲ್ಪಿಸಿದೆ.

ಪರಿಶಿಷ್ಟ ಜಾತಿಯ ಸಫಾಯಿ ಕರ್ಮಚಾರಿ, ಚಿಂದಿ ಆಯುವವರ ಮಕ್ಕಳು, ಚಿತಾಗಾರದ ಮತ್ತು ಸ್ಮಶಾನ ಕಾರ್ಮಿಕರ ಮಕ್ಕಳು, ಮಾನ್ಯುವಲ್ ಸ್ಕ್ಯಾವೆಂಜರ್ಗಳ ಮಕ್ಕಳು, ಬಾಲಕಾರ್ಮಿಕರು ಹಾಗೂ ಜೀತ ವಿಮುಕ್ತ ಮಕ್ಕಳು, ಸಂಚಾರಿ ಕುರಿಗಾಹಿಗಳ ಮಕ್ಕಳು, ಪುನರ್ವಸತಿ ಕಲ್ಪಿತ ದೇವದಾಸಿಯರ ಮಕ್ಕಳು, ಎಚ್ಐವಿಗೆ ತುತ್ತಾದ ಪೋಷಕರ ಮಕ್ಕಳು, ಶೇಕಡ 25ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ವಿಶೇಷ ಚೇತನರು, ಏಕ ಪೋಷಕರನ್ನು ಹೊಂದಿರುವ ಮಕ್ಕಳು, ಅನಾಥ ಮಕ್ಕಳು, ಅಲೆಮಾರಿ ಸಮುದಾಯಗಳಿಗೆ ಸೇರಿರುವವರು, ಯೋಜನೆಗಳಿಂದ ಸ್ಥಳಾಂತರಗೊಂಡ ಫೋಷಕರ ಮಕ್ಕಳು, ಸೇವಾನಿರತ ಮತ್ತು ನಿವೃತ್ತ ಸೈನಿಕರ ಮಕ್ಕಳು ಹಾಗೂ ಎಸ್ಸಿ, ಎಸ್ಟಿ ಆಶ್ರಮ ವಸತಿ ಶಾಲೆಗಳಲ್ಲಿ 5ನೇ ತರಗತಿಯಲ್ಲಿ ಉತ್ತೀರ್ಣರಾದ ಮಕ್ಕಳನ್ನು ಯಾವುದೇ ಪ್ರವೇಶ ಪರೀಕ್ಷೆಗಳಿಲ್ಲದೆ ಕೇವಲ ಅರ್ಜಿಗಳನ್ನು ಸಲ್ಲಿಸಿದರೆ ಸಾಕು, ಅವರಿಗೆ ಪ್ರವೇಶ ನೀಡಬೇಕೆಂದು ಸರ್ಕಾರ ಆದೇಶಿಸಿದೆ.

ಆದರೆ ಇದನ್ನು ನೆಪಗಾಗಿಟ್ಟುಕೊಂಡ ಕೆಲವು ವಸತಿ ಶಾಲೆಗಳ ಸಿಬ್ಬಂದಿ ಮತ್ತು ಪಾಲಕರು ವಿವಿಧ ಇಲಾಖೆಗಳಿಂದ ಸುಳ್ಳು ಪ್ರಮಾಣ ಪತ್ರ ಸಲ್ಲಿಸಿದ್ದಾರೆ. ಕಳೆದ ವರ್ಷ ಅಂಬಳಿ ವಸತಿ ಶಾಲೆಯಲ್ಲಿ ಪ್ರವೇಶ ಪಡೆದ ವೀರಶೈವ ಜಾತಿಗೆ ಸೇರಿದ ವಿದ್ಯಾರ್ಥಿಯೊಬ್ಬರಿಗೆ ಸಫಾಯಿ ಕರ್ಮಚಾರಿಗಳ ಮಕ್ಕಳಿಗೆ ನೀಡುವ ಮೀಸಲಾತಿಯ ಅಡಿಯಲ್ಲಿ ಪ್ರವೇಶ ಕಲ್ಪಿಸಲಾಗಿತ್ತು. ಬಳಿಕ ದಾಖಲೆ ನೀಡಿದ್ದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಾಪಸ್ ಪಡೆದಿದ್ದರು. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ಪ್ರಕರಣವೂ ದಾಖಲಾಗಿತ್ತು.

ಈಗ ಪ್ರವೇಶ ಪರೀಕ್ಷೆ ಬರೆದು ಉತ್ತೀರ್ಣರಾದ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದೆ, ಬಳಿಕ ವಿಶೇಷ ಮೀಸಲಾತಿಯ ಅಡಿಯಲ್ಲಿ ವಿದ್ಯಾರ್ಥಿಗಳ ದಾಖಲಾತಿ ನಡೆಯುತ್ತಿದೆ. ಈ ವರ್ಷವೂ ವಿಶೇಷ ಮೀಸಲಾತಿ ಅಡಿಯಲ್ಲಿ ಸಲ್ಲಿಸಿದ ಶೇ 60ರಷ್ಟು ಪ್ರಮಾಣ ಪತ್ರಗಳು ಖೊಟ್ಟಿಯಾಗಿವೆ, ತನಿಖೆ ಮಾಡಿ ಪ್ರಮಾಣ ಪತ್ರಗಳನ್ನು ಪಡೆದು ದಾಖಲೆ ನೀಡುವಂತೆ ಡಾ.ಬಿ.ಆರ್.ಅಂಬೇಡ್ಕರ್ ಸಂಘದ ಅಧ್ಯಕ್ಷ ಎಚ್.ದೊಡ್ಡಬಸಪ್ಪ ಒತ್ತಾಯಿಸಿದ್ದಾರೆ.

ಈ ಬಗ್ಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಅದು ಸಾಧ್ಯವಾಗಲಿಲ್ಲ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-25-1732546961

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.