ಹಗರಿಬೊಮ್ಮನಹಳ್ಳಿ: ಪಟ್ಟಣದ ಮಾಜಿ ಶಾಸಕ ಎನ್.ಟಿ. ಬೊಮ್ಮಣ್ಣ ಅವರು ಬಾಲಕಿಯರಿಗಾಗಿ ಆರಂಭಿಸಿದ್ದ ಸರ್ಕಾರ ಅನುದಾನಿತ ಇಂದಿರಾ ಗಾಂಧಿ ಪ್ರೌಢಶಾಲೆ ಮುಚ್ಚಲು ಮುಂದಾಗಿರುವುದು ಖಂಡನೀಯ’ ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸಂಚಾಲಕ ಬಸವರಾಜ ಬುಡ್ಡಿ ಆಕ್ರೋಶ ವ್ಯಕ್ತಪಡಿಸಿದರು.

ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಎದುರು ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ‘ಸಂಸ್ಥೆಯ ಆಡಳಿತ ಮಂಡಳಿ ಶಾಲೆ ಮುಚ್ಚಲು ನಿರ್ಧರಿಸಿರುವುದು ಸರಿಯಲ್ಲ. ಶಿಕ್ಷಣ ಇಲಾಖೆ ಈ ಶಾಲೆಯನ್ನು ಮುಚ್ಚದಿರುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸಂಘಟನೆಯ ಎನ್.ಎಂ.ಗೌಸ್ ಮಾತನಾಡಿ, ‘ಸರ್ಕಾರದ ಆದೇಶ ಇಲ್ಲದಿದ್ದರೂ ಶಾಲೆಯ ಮುಖ್ಯ ಶಿಕ್ಷಕರು ವಿದ್ಯಾರ್ಥಿನಿಯರ ದಾಖಲಾತಿ ಮಾಡಿಕೊಳ್ಳದಿರುವುದು ಅವರ ನಿರ್ಲಕ್ಷ್ಯ ಧೋರಣೆ ತೋರಿಸುತ್ತಿದೆ’ ಎಂದು ಆರೋಪಿಸಿದರು.

ಮನವಿ ಸ್ವೀಕರಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಎಸ್. ಜಗದೀಶ್ ಮಾತನಾಡಿ, ‘ಶಾಲೆ ಮುಚ್ಚುವ ಬಗ್ಗೆ ಸರ್ಕಾರದಿಂದ ಯಾವುದೇ ಅಧಿಕೃತ ಆದೇಶ ಬಂದಿಲ್ಲ. ಶಾಲೆಯಲ್ಲಿ ವಿದ್ಯಾರ್ಥಿನಿಯರನ್ನು ದಾಖಲಾತಿ ಮಾಡಿಕೊಳ್ಳದಿದ್ದರೆ ಅವರ ಮೇಲೆ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಸಿದರು.

ಈ ವೇಳೆ ಸಂಘಟನೆಯ ಹಿರಿಯ ಮುಖಂಡರಾದ ಸುಭಾಷ್ ಕಿನ್ನಾಳ, ನಾಗರಾಜ, ಬಿ.ಕೆ. ಬಸವರಾಜ, ರಮೇಶ ಬಣಕಾರ, ಕರಿಬಸಯ್ಯ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-25-1398355726

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.