ಹಗರಿಬೊಮ್ಮನಹಳ್ಳಿ: ಮಾಲವಿ ಜಲಾಶಯಕ್ಕೆ ಬಾಕಿ ಉಳಿದಿರುವ ಎರಡು ಕ್ರೆಸ್ಟ್ ಗೇಟ್ಗಳನ್ನು ಅಳವಡಿಸುವಂತೆ ಒತ್ತಾಯಿಸಿ ರೈತ ಸಂಘದ ಮುಖಂಡರು ತಹಶೀಲ್ದಾರ್ಗೆ ಈಚೆಗೆ ಮನವಿ ಸಲ್ಲಿಸಿದರು.

ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಜೆ.ಎಂ. ವೀರಸಂಗಯ್ಯ ಮಾತನಾಡಿ, ‘ಎರಡು ತಿಂಗಳಿಂದ ಕ್ರೆಸ್ಟ್ ಗೇಟ್ಗಳನ್ನು ಅಳವಡಿಸುವ ಕಾಮಗಾರಿ ನನೆಗುದಿಗೆ ಬಿದ್ದಿದೆ. ಮುಂಗಾರು ಮಳೆ ಆರಂಭವಾಗುವ ಮುನ್ನ ದುರಸ್ತಿಗೊಳಿಸದಿದ್ದರೆ ಮತ್ತೆ ಈ ವರ್ಷವೂ ನೀರು ಪೋಲಾಗಿ ಹರಿಯುವ ಆತಂಕವಿದೆ’ ಎಂದು ಹೇಳಿದರು.

‘ಏಪ್ರಿಲ್ 26ರೊಳಗೆ ಎರಡು ಕ್ರೆಸ್ಟ್ ಗೇಟ್ಗಳನ್ನು ಅಳವಡಿಸಬೇಕು. ಇಲ್ಲದಿದ್ದ ರೆ ಪಟ್ಟಣದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು’ ಎಂದು ಅವರು ಎಚ್ಚರಿಕೆ ನೀಡಿದರು.

ವಿವಿಧ ಸಂಘಟನೆಗಳ ಮುಖಂಡರಾದ ಈ.ಕೃಷ್ಣಮೂರ್ತಿ, ಹುರುಕಡ್ಲಿ ಶಿವಕುಮಾರ್, ರೈತ ಸಂಘದ ಯುವ ಘಟಕದ ಅಧ್ಯಕ್ಷ ತಂಬ್ರಹಳ್ಳಿ ರವಿಕುಮಾರ್, ಎ.ಕುಮಾರಸ್ವಾಮಿ ಇದ್ದರು. ಇದಕ್ಕೂ ಮುನ್ನ ಜಲಾಶಯಕ್ಕೆ ಭೇಟಿ ನೀಡಿ ನನೆಗುದಿಗೆ ಬಿದ್ದಿರುವ ಕಾಮಗಾರಿ ವೀಕ್ಷಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-25-873727819

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.