ಹಗರಿಬೊಮ್ಮನಹಳ್ಳಿ: ತಾಲ್ಲೂಕಿನ ಮಾಲವಿ ಜಲಾಶಯದ ಕ್ರೆಸ್ಟ್ ಗೇಟ್ ಅಳವಡಿಸುವ ಕಾಮಗಾರಿ ನನೆಗುದಿಗೆ ಬಿದ್ದಿದ್ದು ಶೀಘ್ರ ಪೂರ್ಣಗೊಳಿಸದಿದ್ದರೆ ಜಲಾಶಯದ ಅಚ್ಚುಕಟ್ಟು ಪ್ರದೇಶದ ರೈತರೊಂದಿಗೆ ಶಾಸಕರ ಮನೆ ಮುಂದೆ ಧರಣಿ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಜೆ.ಎಂ.ವೀರಸಂಗಯ್ಯ ಎಚ್ಚರಿಸಿದರು.

ಪಟ್ಟಣದ ಕೃಷಿಕ ಭವನದಲ್ಲಿ ಶುಕ್ರವಾರ ನಡೆದ ರೈತಸಂಘದ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು. ಏಪ್ರಿಲ್ ಎರಡನೇ ವಾರ ಮುಂಗಾರು ಪ್ರವೇಶವಾಗುತ್ತದೆ. ಜಲಾಶಯದ 10 ಕ್ರೆಸ್ಟ್ ಗೇಟ್ಗಳಲ್ಲಿ 8 ಗೇಟ್ಗಳನ್ನು ಈಗಾಗಲೇ ಅಳವಡಿಸಲಾಗಿದೆ. ಆದರೆ ಇನ್ನೂ ಎರಡು ಕ್ರೆಸ್ಟ್ ಗೇಟ್ಗಳು ದುರಸ್ತಿಯಾಗಿದ್ದರೂ ಇದುವರೆಗೂ ಅಳವಡಿಸದೇ ನೀರಾವರಿ ಇಲಾಖೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ನಿರ್ಲಕ್ಷ್ಯೆ ತಾಳಿದ್ದಾರೆ. ಮಳೆಗಾಲ ಆರಂಭಕ್ಕೂ ಮುನ್ನ ಜಲಾಶಯದ ಎಲ್ಲ ಗೇಟ್ ಗಳು ಹಾಗೂ ಎಡ ಮತ್ತು ಬಲ ದಂಡೆ ಕಾಲುವೆಗಳನ್ನೂ ಸುಸ್ಥಿತಿಯಲ್ಲಿ ಇಡಬೇಕು ಎಂದು ಆಗ್ರಹಿಸಿದರು.

ಕೇಂದ್ರ ಸರ್ಕಾರ ಖಾಸಗೀಕರಣಕ್ಕೆ ಆದ್ಯತೆ ನೀಡುವ ಮೂಲಕ ಸಾಮಾನ್ಯ ಜನರ ಬದುಕಿನೊಂದಿಗೆ ಚೆಲ್ಲಾಟ ಆಡುತ್ತಿದೆ. ಗಾಳಿ, ನೀರು ಮತ್ತು ಬೆಳಕನ್ನು ದುರ್ಬಲ ವರ್ಗದವರಿಗೆ ಅನುಕೂಲ ಮಾಡಿಕೊಡಬೇಕೆನ್ನುವ ವಿಶ್ವಸಂಸ್ಥೆಯ ಆದೇಶವನ್ನು ಗಾಳಿಗೆ ತೂರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 92 ವಿಶಿಷ್ಟ ಬೆಳೆಗಳನ್ನು ಬೆಳೆಯುವ ರಾಜ್ಯದಲ್ಲಿ ಪ್ರೀಪೇಯ್ಡ್ ಮೀಟರ್ ಅಳವಡಿಸಬೇಕೆನ್ನುವ ಸುತ್ತೋಲೆಯನ್ನು ಈಗಾಗಲೇ ಜೆಸ್ಕಾಂ ಹೊರಡಿಸಿದೆ. ಇದು ಸಾವಿರಾರು ರೈತರನ್ನು ಒಕ್ಕಲೆಬ್ಬಿಸುವ ಯೋಜನೆಯಾಗಿದೆ. ಸುತ್ತೋಲೆ ವಾಪಸ್ ಪಡೆಯಬೇಕು. ರೈತ ಸ್ನೇಹಿ ಯೋಜನೆಗಳನ್ನು ಜಾರಿಗೆ ತರಬೇಕು ಎನ್ನುವ ಹಕ್ಕೊತ್ತಾಯದೊಂದಿಗೆ ಶೀಘ್ರದಲ್ಲಿಯೇ ರೈತ ಸಮಾವೇಶ ಹಮ್ಮಿಕೊಳ್ಳಲಾಗುವುದು. ರೈತರನ್ನು ಸಂಘಟಿಸಿ ಸಮಾಲೋಚನೆ ನಡೆಸಲಾಗುವುದು ಎಂದು ತಿಳಿಸಿದರು. ರೈತ ಸಂಘದ ಜಿಲ್ಲಾ ಯುವ ಘಟಕದ ಅಧ್ಯಕ್ಷ ತಂಬ್ರಹಳ್ಳಿ ರವಿಕುಮಾರ್, ಮುಖಂಡ ರಾಜಾಭಕ್ಷಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-25-262469853

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.