ಹಗರಿಬೊಮ್ಮನಹಳ್ಳಿ: ಪಟ್ಟಣದ ಎಲ್ಲ 23 ವಾರ್ಡ್ಗಳಲ್ಲಿ ಕುಡಿಯುವ ನೀರು ಸಹಿತ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದು ಪುರಸಭೆ ಅಧ್ಯಕ್ಷೆ ಕೆ.ರೇಷ್ಮಾ ಸಿಕಂದರ್ ಹೇಳಿದರು.

ಪಟ್ಟಣದ ಪುರಸಭೆ ಕಚೇರಿಯಲ್ಲಿ ಸೋಮವಾರ ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕರಿಸಿ ಅವರು ಮಾತನಾಡಿ ದರು. ನೈರ್ಮಲ್ಯ, ಸ್ವಚ್ಛತೆ ಹಾಗೂ ಉದ್ಯಾನಗಳ ನಿರ್ವ ಹಣೆ ಕುರಿತು ಗಮನ ಹರಿಸಲಾಗುವುದು, ಎಲ್ಲ ಸದಸ್ಯರು ಮತ್ತು ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸಲಾಗುವುದು, ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.

ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ನಿಗದಿತ ಸಮಯದ ಒಳಗೆ ಬಗೆಹರಿಸುವುದಾಗಿ ತಿಳಿಸಿದರು. ಉಪಾಧ್ಯಕ್ಷೆ ಸೆರೆಗಾರ ನೇತ್ರಾವತಿ ಹುಚ್ಚಪ್ಪ, ಮಾಜಿ ಅಧ್ಯಕ್ಷರಾದ ಎಂ.ಮರಿರಾಮಪ್ಪ, ಕವಿತಾ ಹಾಲ್ದಾಳ್ ವಿಜಯಕುಮಾರ್, ಮಾಜಿ ಉಪಾಧ್ಯಕ್ಷೆ ಅಂಬಿಕಾ ದೇವೇಂದ್ರಪ್ಪ, ಬ್ಲಾಕ್ ಕಾಂಗ್ರೆಸ ಸಮಿತಿ ಅಧ್ಯಕ್ಷ ಕೋರಿ ಗೋಣಿಬಸಪ್ಪ, ಕೆಪಿಸಿಸಿ ವಕ್ತಾರ ಪತ್ರೇಶ್ ಹಿರೇಮಠ್, ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಹಿಳಾ ಘಟಕದ ಅಧ್ಯಕ್ಷೆ ಶಾಹೀರಾ ಬಾನು, ತಾಲ್ಲೂಕು ಘಟಕದ ಅಧ್ಯಕ್ಷೆ ಯಶೋಧಾ ಮಂಜುನಾಥ, ಸದಸ್ಯರಾದ ಯು.ಬಾಳಪ್ಪ, ತ್ಯಾವಣಗಿ ಕೊಟ್ರೇಶ್, ಮುಖಂಡರಾದ ಬ್ರಿಕ್ಸ್ ಅಲ್ಲಾಭಕ್ಷಿ, ಸಿಕಂದರ್, ಗುಂಡ್ರು ಹನುಮಂತಪ್ಪ, ಬಾಲಕೃಷ್ಣಬಾಬು, ಬಾರಿಕರ ಬಾಪೂಜಿ, ಪ್ರಕಾಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-25-1564228877

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.