ಹಗರಿಬೊಮ್ಮನಹಳ್ಳಿ: ಪುರಸಭೆ ಸದಸ್ಯರ ಚುನಾವಣೆ ನಡೆದು ಎರಡೂವರೆ ವರ್ಷಗಳ ಬಳಿಕ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಬುಧವಾರ ಚುನಾವಣೆ ನಡೆಯಲಿದೆ.
ಅಧ್ಯಕ್ಷರ ಆಯ್ಕೆ ಭಾರಿ ಕುತೂಹಲ ಕೆರಳಿಸಿದ್ದು, ಎರಡೂ ಪಕ್ಷಗಳಲ್ಲೂ ಹೈಕಮಾಂಡ್ ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದೆ.
ಒಟ್ಟು 23ಜನ ಸದಸ್ಯರಿದ್ದು, ಕಾಂಗ್ರೆಸ್ 12, ಬಿಜೆಪಿ 11 ಸದಸ್ಯರ ಬಲಾಬಲವಿದೆ. ಜತೆಗೆ ಕಾಂಗ್ರೆಸ್ ಪಕ್ಷದ ಸಂಸದರು ಮತ್ತು ಜೆಡಿಎಸ್ ಪಕ್ಷದ ಶಾಸಕರ ಮತವೂ ಇದೆ. ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ, ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡ(ಎಸ್ಟಿ) ಮಹಿಳೆಗೆ ಮೀಸಲಿದೆ.
ಅಧ್ಯಕ್ಷ ಸ್ಥಾನಕ್ಕೆ ಮಾತ್ರ ಭಾರಿ ಪೈಪೋಟಿ ನಡೆದಿದೆ. ಎರಡೂ ಪಕ್ಷಗಳ ಸದಸ್ಯರು ಪ್ರವಾಸದಲ್ಲಿದ್ದು, ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಹೆಸರು ಇನ್ನೂ ಅಂತಿಮಗೊಳಿಸಿಲ್ಲ. ಚುನಾವಣೆಗೆ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.