ಹಗರಿಬೊಮ್ಮನಹಳ್ಳಿ: ‘ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆಗೆ ಗೈರಾದ ಹಾಗೂ ಸಮರ್ಪಕ ಮಾಹಿತಿ ನೀಡಿದ ವಿವಿಧ ಇಲಾಖೆ ಅಧಿಕಾರಿಗಳ ವಿರುದ್ಧ ನೋಟಿಸ್ ನೀಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೆ.ತಿಮ್ಮಪ್ಪ ಅವರು ಸೂಚನೆ ನೀಡಿದರು.

ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿ ಅವರು, ‘ಸಾಮಾನ್ಯ ಸಭೆಗೆ ಗೈರಾಗಿದ್ದ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಭೆಗೆ ಅಧಿಕಾರಿಗಳು ಬರದೆ ಯಾರನ್ನು ಕಳಿಸಿದ್ದೀರಿ? ಬಂದವರು ಮಾಹಿತಿ ಇಲ್ಲದೆ ಸಭೆಗೆ ಬರೋದೆ ಬೇಡ. ಬೇಕಾಬಿಟ್ಟಿಯಾಗಿ ಸಭೆಗೆ ಬಂದರೆ ಹೇಗೆ ಎಂದು ತಾಲ್ಲೂಕು ಪಂಚಾಯಿತಿ ಇಒ ವಿಶ್ವನಾಥ ಪಾಲಯ್ಯನಕೋಟೆ ಅವರು ಗೈರಾಗಿದ್ದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಸಭೆಗೆ ಬಾರದ ಅಧಿಕಾರಿಗಳನ್ನು ಸೂಕ್ತ ಕಾರಣ ಕೇಳಿ ನೋಟಿಸ್ ನೀಡುವಂತೆ ಸೂಚಿಸಿದರು.

ತಾಲ್ಲೂಕಿನ ವಿವಿಧ ಎಂಟು ಇಲಾಖೆಗಳ ₹133.49 ಕೋಟಿ ಅನುದಾನಕ್ಕೆ ವೇತನ ಮತ್ತು ವೇತನೇತರ ಲಿಂಕ್ ಡಾಕ್ಯೂಮೆಂಟ್ಗೆ ಅನುಮೋದನೆ ನೀಡಲಾಗಿದೆ. ವಾರ್ಷಿಕ ಲೆಕ್ಕಪತ್ರಗಳನ್ನು ಒದಗಿಸದ ಅಧಿಕಾರಿಗಳು ಕೂಡಲೇ ಎಲ್ಲ ಮಾಹಿತಿಯನ್ನು ನಿಗದಿತ ಅವಧಿಯೊಳಗೆ ಒದಗಿಸಬೇಕು ಎಂದು ಇಒ ವಿಶ್ವನಾಥ ಮಾಹಿತಿ ನೀಡಿದರು.

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಜಗದೀಶ್ ಈ.ದಿಡಗೂರ, ‘ಮೇ ತಿಂಗಳ ಅಂತ್ಯದವರೆಗೂ ಕಾಯಂ ಮತ್ತು ಹೊರಗುತ್ತಿಗೆ ನೌಕರರಿಗೆ ವೇತನ ನೀಡಲಾಗಿದೆ. ಕಾನೂನು ಪದವೀಧರರಿಗೆ ಶಿಷ್ಯವೇತನ ಬಿಡುಗಡೆ ಮಾಡಲಾಗಿದೆ’ ಎಂದು ಮಾಹಿತಿ ನಿಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಎಸ್. ಜಗದೀಶ್ ಮಾತನಾಡಿ, ‘ಪರಿಸರ ದಿನಾಚರಣೆ ಸಂದರ್ಭದಲ್ಲಿ ಪ್ರತಿ ಶಾಲೆಗಳಲ್ಲಿ 5 ಸಸಿಗಳನ್ನು ನೆಡುವ ಚಿಂತನೆ ಇದೆ ಎಂದು ತಿಳಿಸಿದರು. ಪ್ರತಿಕ್ರಿಯಿಸಿದ ಪಿ.ವಿಶ್ವನಾಥ ‘ತಾಲ್ಲೂಕಿನ ಎಲ್ಲ ಮುಖ್ಯ ಶಿಕ್ಷಕರು ಸಸಿಗಳನ್ನು ನೆಡಬೇಕು’ ಎಂದು ತಿಳಿಸಿದರು.

ಈ ವೇಳೆ ಕ್ಷೇತ್ರ ಸಮನ್ವಯಾಧಿಕಾರಿ ಎಂ.ಎಸ್. ಪ್ರಭಾಕರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಕೊಟ್ರೇಶ್ನಾಯ್ಕ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ವಿಜಯ್ ನಿಚ್ಚಾಪುರ, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಎಚ್.ಎಂ.ಪ್ರವೀಣ್ಕುಮಾರ್, ಪಶುವೈದ್ಯ ಡಾ.ಪ್ರಶಾಂತಗೌಡ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಾಜಕುಮಾರನಾಯ್ಕ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-25-40976053

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.