ಗುರುವಾರ , ಮಾರ್ಚ್ 30, 2023
32 °C

ಹಗರಿಬೊಮ್ಮನಹಳ್ಳಿ: ಬಸ್ ಸಂಚಾರಕ್ಕೆ ಆಗ್ರಹಿಸಿ ನೂರಾರು ವಿದ್ಯಾರ್ಥಿಗಳ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಗರಿಬೊಮ್ಮನಹಳ್ಳಿ (ವಿಜಯನಗರ ಜಿಲ್ಲೆ): ಬಸ್ ಸಂಚಾರಕ್ಕೆ ಆಗ್ರಹಿಸಿ ಕಾಲೇಜು ವಿದ್ಯಾರ್ಥಿಗಳು ಮಂಗಳವಾರ ಇಲ್ಲಿನ ಬಸ್ ಡಿಪೊ ಎದುರು ಎಸ್‌ಎಫ್‌ಐ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ತಾಲ್ಲೂಕಿನ ಮುತ್ಕೂರು, ಬನ್ನಿಗೋಳ, ಶೀಗೇನಹಳ್ಳಿ, ಮಾದೂರು, ಸೊಬಟಿ, ಅಂಕಸಮುದ್ರ ಗ್ರಾಮಗಳಿಗೆ ಬಸ್ ಸಂಚಾರ ಆರಂಭಿಸಬೇಕು. ಬಸ್ಸುಗಳಿಲ್ಲದ ಕಾರಣ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ ಎಂದು ತಿಳಿಸಿದರು.

ಎಸ್‌ಎಫ್‌ಐ ತಾಲ್ಲೂಕು ಘಟಕದ ಸಂಚಾಲಕ ಅಬ್ದುಲ್ ಸುಬಾನ್ ಮಾತನಾಡಿ, ತಾಲ್ಲೂಕಿನ‌ ಹಲವು ಗ್ರಾಮಗಳಿಗೆ ಬಸ್ ವ್ಯವಸ್ಥೆ ಇಲ್ಲ. ನೂರಾರು ವಿದ್ಯಾರ್ಥಿಗಳು ನಿತ್ಯ ತರಗತಿಗಳಿಂದ ವಂಚಿತರಾಗುತ್ತಿದ್ದಾರೆ. ಕೂಡಲೇ ಬಸ್ ಸಂಚಾರ ಆರಂಭಿಸಬೇಕು ಎಂದು ಒತ್ತಾಯಿಸಿದರು.

ವಿದ್ಯಾರ್ಥಿ ಮುಖಂಡರಾದ ಟಿ.ಎಂ.ಸುದೀಪ್.ಕೆ.ಸುರೇಶ್,ಕೆ. ಶಿವಾನಂದ, ತಳವಾರ ಮಂಜುನಾಥ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು