ಹಗರಿಬೊಮ್ಮನಹಳ್ಳಿ (ವಿಜಯನಗರ ಜಿಲ್ಲೆ): ಎರಡು ಪ್ರತ್ಯೇಕ ಘಟನೆಗಳಲ್ಲಿ ತಾಲ್ಲೂಕಿನಲ್ಲಿ ಇಬ್ಬರು ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕರು ಮೃತಪಟ್ಟಿದ್ದಾರೆ.

ತಾಲ್ಲೂಕಿನ ಹಲಗಾಪುರ ಕೆರೆಯಲ್ಲಿ ಕೆಲಸ ಮಾಡುತ್ತಿದ್ದ ಓಬಳಾಪುರ ಗ್ರಾಮದ ದುರುಗಪ್ಪ (38) ಕೆಲಸ ಮಾಡುವಾಗ ಸುಸ್ತಾಗಿ, ಮರದ ನೆರಳಲ್ಲಿ ವಿಶ್ರಾಂತಿ ತೆಗೆದುಕೊಳ್ಳುವಾಗ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಚಿಕಿತ್ಸೆ ಗೆ ಸ್ಪಂದಿಸದೇ ನಿಧನರಾಗಿದ್ದಾರೆ.

ತಾಲ್ಲೂಕಿನ ಬಾಚಿಗೊಂಡನಹಳ್ಳಿ ಕೆರೆಯಲ್ಲಿ ಹೂಳೆತ್ತುವ ಕೆಲಸ ಮಾಡುವಾಗ ಚಿಲಗೋಡು ಗ್ರಾಮದ ತಳವಾರ ನಾಗಪ್ಪ (55) ತೀವ್ರ ಅಸ್ವಸ್ಥರಾಗಿ ಎದೆನೋವಿನಿಂದ ಮೃತರಾಗಿದ್ದಾರೆ ಎಂದು ನರೇಗಾ ಕಾರ್ಮಿಕ ರುದ್ರಪ್ಪ ತಿಳಿಸಿದ್ದಾರೆ.

ಎರಡೂ ಗ್ರಾಮ ಪಂಚಾಯ್ತಿಗಳ ಪಿಡಿಒಗಳಿಂದ ಎಲ್ಲ ಮಾಹಿತಿ ಪಡೆದು ಮೇಲಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದು ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ರಮೇಶ್ ಮಹಾಲಿಂಗಪುರ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.