ಹಗರಿಬೊಮ್ಮನಹಳ್ಳಿ: ಪಟ್ಟಣದ ಹೊರವಲಯದಲ್ಲಿರುವ ಅಗ್ನಿಶಾಮಕ ಠಾಣೆ ಮುಂದಿನ ರಾಜ್ಯ ಹೆದ್ದಾರಿಯಲ್ಲಿ ಮಹಿಳೆಯೊಬ್ಬರು ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಗುರುವಾರ ನಡೆದಿದೆ.

ಇಲ್ಲಿನ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಹೊಸಪೇಟೆ ತಾಲ್ಲೂಕಿನ ಗರಗ ನಾಗಲಾಪುರ ತಾಂಡಾದ ಮಹಿಳೆ ಪ್ರಿಯಾಂಕ(27) ಸಾವನ್ನಪ್ಪಿದವರು. ಪಟ್ಟಣದ ರಾಮ್ ರಹೀಂ ನಗರದಲ್ಲಿ ವಾಸವಾಗಿದ್ದರು. ಗುರುವಾರ ರಾತ್ರಿ 8.30ಕ್ಕೆ ಕೆಲಸ ಮುಗಿಸಿ ತಾಲ್ಲೂಕಿನ ಆನೇಕಲ್ಲು ತಾಂಡಾದ ಯುವಕರಾದ ಸುನೀಲ್ನಾಯ್ಕ ಮತ್ತು ಕೃಷ್ಣನಾಯ್ಕ ಅವರೊಂದಿಗೆ ಬೈಕ್ನಲ್ಲಿ ತೆರಳಿದ್ದರು. ಅಗ್ನಿಶಾಮಕ ಠಾಣೆಯ ಮುಂದೆ ಇರುವ ಹೊಸಪೇಟೆ-ಶಿವಮೊಗ್ಗ ರಾಜ್ಯ ಹೆದ್ದಾರಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಆಕೆಯ ತಲೆಗೆ ತೀವ್ರ ಪೆಟ್ಟಾಗಿದೆ.

ಮಹಿಳೆಯ ಸಾವಿನ ನಿಖರ ಕಾರಣ ತಿಳಿದುಬಂದಿಲ್ಲ, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಯುವಕರಿಬ್ಬರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ. ರಾತ್ರಿಯಿಂದಲೇ ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ ಪಟ್ಟಣದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಅನುಮಾನಸ್ಪದ ಹಾಗೂ ಅನೈಸರ್ಗಿಕ ಸಾವು ಎಂದು ಪ್ರಕರಣ ದಾಖಲಾಗಿದೆ. ಮೃತ ಮಹಿಳೆಗೆ 4 ವರ್ಷದ ಮಗನಿದ್ದಾನೆ. ತಾಲ್ಲೂಕಿನ ವ್ಯಾಸಾಪುರ ತಾಂಡದ ಯುವಕನೊಂದಿಗೆ 5 ವರ್ಷದ ಹಿಂದೆ ಮದುವೆಯಾಗಿತ್ತು. ಆನಂತರ ವಿಚ್ಛೇದನವಾಗಿತ್ತು ಎಂದು ತಿಳಿದುಬಂದಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-25-1094353649

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.