ಹಗರಿಬೊಮ್ಮನಹಳ್ಳಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಖಂಡಿಸಿ ಸಿಪಿಐ(ಎಂ) ಪಕ್ಷದ ಮುಖಂಡರು ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಪಕ್ಷದ ಜಿಲ್ಲಾ ಸಮಿತಿ ಸದಸ್ಯ ಆರ್.ಎಸ್.ಬಸವರಾಜ ಮಾತನಾಡಿ, ‘ದೇಶದಲ್ಲಿ ದುಡಿಯುವ ವರ್ಗದ ಜನರು ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡುವ ಮೂಲಕ ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ದೇಶದ ಐದು ರಾಜ್ಯಗಳಲ್ಲಿ ಚುನಾವಣೆ ನಡೆಯುವ ಸಂದರ್ಭದ ಭಾರಿ ಬಹಿರಂಗ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ಗೆ ಯಾವುದೇ ಕೊರತೆ ಇಲ್ಲ ಎಂದು ಅಬ್ಬರದ ಮಾತುಗಳನ್ನಾಡಿದ್ದರು. ಆದರೆ ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾದ ತಕ್ಷಣ ತೈಲ ಬೆಲೆ ಏರಿಕೆ ಮಾಡಲಾಯಿತು’ ಎಂದು ಹೇಳಿದರು.

ಮುಖಂಡ ಎಸ್.ಜಗನ್ನಾಥ್ ಮಾತನಾಡಿ, ‘ಜನರ ಮೇಲಿನ ಆರ್ಥಿಕ ಹೊರೆ ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇಂಧನದ ಮೇಲೆ ವಿಧಿಸುತ್ತಿರವ ಅತಿಯಾದ ತೆರಿಗೆಯನ್ನು ಕೂಡಲೇ ಕಡಿತಗೊಳಿಸಬೇಕು’ ಎಂದು ಆಗ್ರಹಿಸಿದರು.

ಪಕ್ಷದ ತಾಲ್ಲೂಕು ಘಟಕದ ಕಾರ್ಯದರ್ಶಿ ಬಿ.ಮಾಳಮ್ಮ, ಮುಖಂಡರಾದ ರಂಗಪ್ಪ ದಾಸರ್, ಎಂ.ಆನಂದ್, ಕೆ.ಗಾಳೆಪ್ಪ, ಕೆ.ರಮೇಶ್. ಕೆ.ಅಂಜಿನಮ್ಮ, ಪಿ.ಚಾಂದ್ಬೀ, ರಮೇರ್ಶ, ದುರುಗಮ್ಮ, ಕರಿಬಸಮ್ಮ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-25-626449911

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.