ಹಗರಿಬೊಮ್ಮನಹಳ್ಳಿ: ತಾಲ್ಲೂಕಿನಲ್ಲಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಯುವಂತೆ ಒತ್ತಾಯಿಸಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ) ಮುಖಂಡರು ಇಲ್ಲಿನ ತಹಶೀಲ್ದಾರ್ ಆರ್.ಕವಿತಾ ಅವರಿಗೆ ಮನವಿ ಸಲ್ಲಿಸಿದರು.

ಪಕ್ಷದ ಜಿಲ್ಲಾ ಘಟಕದ ಕಾರ್ಯದರ್ಶಿ ಆರ್.ಎಸ್. ಬಸವರಾಜ ಮಾತನಾಡಿ, ‘ಯುದ್ಧದ ನೆಪವೊಡ್ಡಿ ಸಿಲಿಂಡರ್ ಮಾರಾಟಗಾರರು ಗ್ರಾಹಕರಿಂದ ಹೆಚ್ಚುವರಿ ಹಣ ವಸೂಲಿ ಮಾಡುತ್ತಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಸಾರ್ವಜನಿಕರಿಗೆ ಸಿಲಿಂಡರ್ ದರ ಏರಿಕೆಯೂ ಹೊರೆಯಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಕ್ಷದ ತಾಲ್ಲೂಕು ಘಟಕದ ಕಾರ್ಯದರ್ಶಿ ಬಿ.ಮಾಳಮ್ಮ ಮಾತನಾಡಿ, ‘ಗ್ರಾಹಕರು ಅಂಗಡಿಗಳ ಮುಂದೆ ಸಾಲುಗಟ್ಟಿ ನಿಂತು ಬುಕ್ಕಿಂಗ್ ಮಾಡಿ ಹಲವು ದಿನಗಳಾದರೂ ಸಿಲಿಂಡರ್ ಪೂರೈಕೆಯಾಗುತ್ತಿಲ್ಲ. ಕೆಲವು ಮಾರಾಟಗಾರರು ಕಾಳಸಂತೆಯಲ್ಲಿ ₹2 ಸಾವಿರಕ್ಕೂ ಅಧಿಕ ದರಕ್ಕೆ ಸಿಲಿಂಡರ್ ಮಾರಾಟ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.

ಈ ವೇಳೆ ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಜಗನ್ನಾಥ, ದುರುಗಮ್ಮ, ನಾಗಮ್ಮ, ಕೆ.ರಮೇಶ್, ಎಂ. ಆನಂದ್, ಪಿ.ಚಾಂದ್ ಬೀ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-25-1671466095

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.