ಹಗರಿಬೊಮ್ಮನಹಳ್ಳಿ: ತಾಲ್ಲೂಕಿನಲ್ಲಿ ಮುಂಗಾರಿನಲ್ಲಿ ಒಟ್ಟು 54 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದ್ದು, ಬಿತ್ತನೆಗೆ ಅಗತ್ಯ ಬೀಜ ದಾಸ್ತಾನಿದೆ. ರೈತರು ಆತಂಕ ಪಡುವ ಅಗತ್ಯವಿಲ್ಲ’ ಎಂದು ಶಾಸಕ ಕೆ.ನೇಮರಾಜನಾಯ್ಕ ಹೇಳಿದರು.

ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಕೃಷಿ ಇಲಾಖೆಯಿಂದ ರಿಯಾಯಿತಿ ದರದಲ್ಲಿ ವಿತರಿಸುತ್ತಿರುವ ಬಿತ್ತನೆ ಬೀಜ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.

ತಾಲ್ಲೂಕು ಕೃಷಿ ಕೇಂದ್ರದಲ್ಲಿ ಒಟ್ಟು 275 ಕ್ವಿಂಟಲ್ ಬಿತ್ತನೆ ಜೋಳ ಬೀಜ ಇದ್ದು, ಮೆಕ್ಕೇಜೋಳ, ಶೇಂಗಾ, ಸೂರ್ಯಕಾಂತಿ ಸೇರಿದಂತೆ ಮುಂಗಾರಿಗೆ ಅಗತ್ಯವಿರುವ ಬೀಜವನ್ನು ದಾಸ್ತಾನು ಮಾಡಲಾಗಿದೆ’ ಎಂದರು.

ರಾಜ್ಯದಲ್ಲಿ ಯಾರೇ ಮುಖ್ಯಮಂತ್ರಿಯಾದರೂ ವಿಧಾನಸಭಾ ಕ್ಷೇತ್ರಕ್ಕೆ ಅನುದಾನ ಬರುವುದಿಲ್ಲ. ಕೇಂದ್ರ ಸರ್ಕಾರದಿಂದ ಅನುದಾನ ತಂದು ಅಭಿವೃದ್ಧಿಪಡಿಸಲಾಗುತ್ತಿದೆ. ತಾಲ್ಲೂಕಿನಲ್ಲಿ ₹74 ಕೋಟಿ ಅನುದಾನದಲ್ಲಿ ರಸ್ತೆ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ತಿಳಿಸಿದರು.

ಜೆಡಿಎಸ್ ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ವೈ. ಮಲ್ಲಿಕಾರ್ಜುನ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಬಿ. ಪಾಟೀಲ್, ಕೃಷಿ ಅಧಿಕಾರಿಗಳಾದ ಶಿವಮೂರ್ತಿ, ಮಹೇಶ್, ನಾಗಾರ್ಜುನ, ಆತ್ಮ ಯೋಜನೆಯ ಭೋಜ್ಯಾನಾಯ್ಕ, ಕೃಷಿಕ ಸಮಾಜದ ಅಧ್ಯಕ್ಷ ಕೆ.ಪಿ.ದೇವರಾಜ, ನಿರ್ದೇಶಕ ಜಿ.ಮಂಜುನಾಥ, ನಾಣ್ಯಾಪುರ ಕೃಷ್ಣಮೂರ್ತಿ, ಹೋಟೆಲ್ ಸಿದ್ದರಾಜು, ಪಾಂಡುರಂಗನಾಯ್ಕ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-25-704333903

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.