ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂಸಂತ್ರಸ್ತರಿಂದ ಅರೆಬೆತ್ತಲೆ ಪ್ರತಿಭಟನೆ

Published 13 ಏಪ್ರಿಲ್ 2024, 14:17 IST
Last Updated 13 ಏಪ್ರಿಲ್ 2024, 14:17 IST
ಅಕ್ಷರ ಗಾತ್ರ

ಕುಡತಿನಿ (ತೋರಣಗಲ್ಲು): ಕೈಗಾರಿಕೆಗಳ ಸ್ಥಾಪನೆಗಾಗಿ ವಶಪಡಿಸಿಕೊಂಡ ಜಮೀನುಗಳಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಿ ಇಲ್ಲವೇ ಜಮೀನುಗಳನ್ನು ವಾಪಸ್ಸು ನೀಡಿ ಎಂದು ಒತ್ತಾಯಿಸಿ ಭೂಸಂತ್ರಸ್ಥರು ಹೊಸ ಬಸ್ ನಿಲ್ದಾಣದ ಆವರಣದಲ್ಲಿ ಹಮ್ಮಿಕೊಂಡಿರುವ ಹೋರಾಟ ಶನಿವಾರ 483ನೇ ದಿನ ಪೂರೈಸಿತು.

ಕುಡತಿನಿ, ವೇಣಿವೀರಾಪುರ, ಕೊಳ್ಳಗಲ್ಲು, ಜಾನೆಕುಂಟೆ ಹಾಗೂ ಹರಗಿನಡೋಣಿ ಮೊದಲಾದ ಗ್ರಾಮಗಳ ರೈತರು ಧರಣಿ ನಡೆಸುತ್ತಿದ್ದರೂ ಜಿಲ್ಲಾಡಳಿತ, ರಾಜ್ಯ ಸರ್ಕಾರ ಸಮಸ್ಯೆ ಪರಿಹರಿಸದೇ ವಿಳಂಬ ಧೋರಣೆ ಅನುಸರಿಸುತ್ತಿರುವ ಹಿನ್ನೆಲೆ ಭೂಸಂತ್ರಸ್ತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.

ಭೂಸಂತ್ರಸ್ತರ ಹೋರಾಟ ಸಮಿತಿ ಸಂಚಾಲಕ ಎಂ.ತಿಪ್ಪೇಸ್ವಾಮಿ ಮಾತನಾಡಿ, ‘ಹೋರಾಟ ಸ್ಥಳಕ್ಕೆ ಸಚಿವರು, ಶಾಸಕರು ಹಾಗೂ ಜಿಲ್ಲಾಧಿಕಾರಿಗಳು ಆಗಮಿಸಿ ಸುಳ್ಳು ಭರವಸೆ ನೀಡಿ ಹೋಗುತ್ತಿದ್ದಾರೆ. ಮುಖ್ಯಮಂತ್ರಿ ಹಾಗೂ ಕೈಗಾರಿಕಾ ಸಚಿವರು ರೈತರ ನೇತೃತ್ವದಲ್ಲಿ ಕಳೆದ ಬೆಳಗಾವಿ ಅಧಿವೇಶನದಲ್ಲಿ ಸಭೆ ನಡೆಸಿ, ಚರ್ಚಿಸಿ ಸಮಸ್ಯೆ ತ್ವರಿತವಾಗಿ ಇತ್ಯಾರ್ಥಪಡಿಸುವುದಾಗಿ ನೀಡಿದ ಭರವಸೆ ಹುಸಿಯಾಗಿದೆ. ಸರ್ಕಾರವು ಚುನಾವಣೆಯ ನಂತರ ರೈತರ ಸಮ್ಮುಖದಲ್ಲಿ ಸಭೆ ನಡೆಸಿ, ಸಮಸ್ಯೆ  ಶೀಘ್ರವಾಗಿ ಪರಿಹರಿಸಬೇಕು’ ಎಂದು ಒತ್ತಾಯಿಸಿದರು.

ವಿವಿಧ ಸಂಘಟನೆಗಳ ಮುಖಂಡರಾದ ಜಂಗ್ಲಿಸಾಬ್, ದಸ್ತಗಿರಿಸಾಬ್, ವೀರಪ್ಪ, ಹುಚ್ಚಪ್ಪ, ಎಂ.ಪಿ.ತಿಮ್ಮಪ್ಪ, ರುದ್ರಪ್ಪ, ಮಲ್ಲಯ್ಯ, ಶೇಖರ್ ಇತರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT