ಹೊಸಪೇಟೆ (ವಿಜಯನಗರ): ಈ ಬಾರಿಯ ಹಂಪಿ ಉತ್ಸವವನ್ನು ಫೆಬ್ರುವರಿ 28ರಿಂದ ಮೂರು ದಿನಗಳ ಕಾಲ ನಡೆಸಲು ಸರ್ಕಾರ ಸಮ್ಮತಿ ಸೂಚಿಸಿದ್ದು, ಒಂದು ತಿಂಗಳು ವಿಳಂಬವಾಗಿ, ಬಿರು ಬೇಸಿಗೆಯಲ್ಲಿ ಉತ್ಸವ ನಡೆಸುವುದು ಇದೀಗ ಅನಿವಾರ್ಯವಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದ್ದು, ಸಿ.ಎಂ ಸಮ್ಮತಿಯ ಮೇರೆಗೆ ಈ ಬಗ್ಗೆ ಅಧಿಕೃತ ಪ್ರಕಟಣೆ ನೀಡಿದ್ದಾರೆ.

ಫೆ.28ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಂಪಿ ಉತ್ಸವ ಉದ್ಘಾಟಿಸಲಿದ್ದು, ಆ ದಿನ ಮಾತ್ರವಲ್ಲದೆ, ಮಾರ್ಚ್ 1 ಮತ್ತು 2ರಂದು ಸಾಂಸ್ಕೃತಿಕ ವೈವಿಧ್ಯಗಳು ಪ್ರೇಕ್ಷಕರನ್ನು ರಂಜಿಸಲಿವೆ. 2ರಂದು ಸಮಾರೋಪ ನಡೆಯಲಿದೆ ಎಂದು ಸಚಿವರು ತಿಳಿಸಿದ್ದಾರೆ.

‘ಈ ಬಾರಿಯೂ ಅದ್ಧೂರಿ ಹಾಗೂ ಸಂಪ್ರದಾಯವಾಗಿ ಹಂಪಿ ಉತ್ಸವ ಆಚರಿಸಲಾಗುವುದು. ಉತ್ಸವದ ಸಿದ್ಧತೆ ಮಾಡಿಕೊಳ್ಳವಂತೆ ಜಿಲ್ಲಾಧಿಕಾರಿ ಅವರಿಗೆ ನಿರ್ದೇಶನ ನೀಡಲಾಗಿದೆ’ ಎಂದು ಸಚಿವರು ತಿಳಿಸಿದ್ದಾರೆ.

ಸಮಸ್ಯೆ ಆಗದು: ‘ಕಳೆದ ವರ್ಷ ಫೆಬ್ರುವರಿ 2ರಿಂದ 4ರವರೆಗೆ ಹಂಪಿ ಉತ್ಸವ ನಡೆದಿತ್ತು. ಈ ವರ್ಷ ಬಹುತೇಕ ಒಂದು ತಿಂಗಳು ವಿಳಂಬವಾಗಿ ಉತ್ಸವ ನಡೆಯುತ್ತಿದೆ, ಮಾರ್ಚ್ ತಿಂಗಳು ಬಿರು ಬೇಸಿಗೆಯ ಸಮಯ ಆಗಿದ್ದರೂ ಕಾರ್ಯಕ್ರಮಗಳು ನಡೆಯುವುದು ಸಂಜೆ ಹೊತ್ತಲ್ಲಿ, ಹೀಗಾಗಿ ಯಾವುದೇ ಸಮಸ್ಯೆ ಆಗದು, ಇದೀಗ ಜನವರಿ ಆರಂಭದಲ್ಲೂ ಚಳಿ ಇರುವ ಕಾರಣ ಫೆಬ್ರುವರಿ ಅಂತ್ಯದ ವೇಳೆಗೆ ಬಿಸಿಲಿನ ತಾಪ ತೀವ್ರಗತಿಯಲ್ಲಿ ಹೆಚ್ಚಾಗಲಾರದು ಎಂಬ ವಿಶ್ವಾಸ ಇದೆ’ ಎಂದು ಜಿಲ್ಲಾಧಿಕಾರಿ ಎಂ.ಎಂ.ದಿವಾಕರ್ ‘ಪ್ರಜಾವಾಣಿ’ಗೆ ತಿಳಿಸಿದರು.

‘ಕಳೆದ ವರ್ಷ ತೀವ್ರ ಬರಗಾಲದಿಂದಾಗಿ ತುಂಗಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ ಬಹಳ ಕಡಿಮೆ ಇತ್ತು. ಫೆಬ್ರುವರಿ ಸಮಯದಲ್ಲಿ 10 ಟಿಎಂಸಿ ಅಡಿಗಿಂತಲೂ ಕಡಿಮೆ ನೀರಿತ್ತು. ಈ ಬಾರಿ ಉತ್ತಮ ಮಳೆಯಾಗಿರುವುದರಿಂದ ಜಲಾಶಯದಲ್ಲಿ 80 ಟಿಎಂಸಿ ಅಡಿಗಿಂತ ಅಧಿಕ ನೀರು ಈಗ ಇದ್ದು, ಮಾರ್ಚ್ ಆರಂಭದ ವೇಳೆಗೆ ಸಹ ಸಾಕಷ್ಟು ನೀರಿನ ಸಂಗ್ರಹ ಇರಲಿದೆ. ಹೀಗಾಗಿ ನದಿಯಲ್ಲಿ ನೀರಿನ ಕೊರತೆ ಉಂಟಾದರೆ ಅಣೆಕಟ್ಟೆಯಿಂದ ನೀರು ಹರಿಸಿ ಉತ್ಸವಕ್ಕೆ ತೊಂದರೆ ಆಗದಂತೆ ವ್ಯವಸ್ಥೆ ಮಾಡಬಹುದಾಗಿದೆ’ ಎಂದು ಅವರು ಹೇಳಿದರು.

‘ಸರ್ಕಾರದ ನಿರ್ಧಾರದಂತೆ ತಕ್ಷಣದಿಂದಲೇ ಹಂಪಿ ಉತ್ಸವಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುವುದು. ಕಳೆದ ವರ್ಷ 5 ಲಕ್ಷಕ್ಕಿಂತಲೂ ಅಧಿಕ ಮಂದಿ ಉತ್ಸವಕ್ಕೆ ಬಂದಿದ್ದರು. ಈ ಬಾರಿ ಸಹ ಉತ್ಸವವನ್ನು ಯಶಸ್ವಿಯಾಗಿ ನಡೆಸಲು ಈಗಿನಿಂದಲೇ ಸಿದ್ಧತೆ ಮಾಡಲಿದ್ದೇವೆ’ ಎಂದು ಜಿಲ್ಲಾಧಿಕಾರಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.