ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೆಬ್ರುವರಿ 2ರಿಂದ ಹಂಪಿ ಉತ್ಸವ: ಸಚಿವ ಜಮೀರ್ ಅಹ್ಮದ್ ಖಾನ್

Published 26 ಡಿಸೆಂಬರ್ 2023, 6:26 IST
Last Updated 26 ಡಿಸೆಂಬರ್ 2023, 6:26 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ವಿಶ್ವ ವಿಖ್ಯಾತ ಹಂಪಿ ಉತ್ಸವ ಫೆಬ್ರುವರಿ 2ರಿಂದ ಮೂರು ದಿನಗಳ ಕಾಲ ನಡೆಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರುವರಿ 2ರಿಂದ ಮೂರು ದಿನಗಳ ಕಾಲ ಹಂಪಿ ಉತ್ಸವ ನಡೆಸಲು ಒಪ್ಪಿಗೆ ನೀಡಿದ್ದು, ಮೊದಲ ದಿನ ಉತ್ಸವ ಉದ್ಘಾಟನೆ ಮಾಡಲಿದ್ದಾರೆ. ಈ ಸಂಬಂಧ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ದಿವಾಕರ್ ಅವರಿಗೆ ಸೂಚಿಸಲಾಗಿದೆ ಎಂದು ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಬಾರಿಯ ಹಂಪಿ ಉತ್ಸವ ವಿಜೃಂಭಣೆಯಿಂದ ಮಾಡುವಂತೆ ಹಾಗೂ ಸ್ಥಳೀಯ ಕಲಾವಿದರು ಹಾಗೂ ಸಾಂಸ್ಕೃತಿಕ ಕಲೆಗಳಿಗೆ ಒತ್ತು ನೀಡಲು ಉಸ್ತುವಾರಿ ಸಚಿವರು ನಿರ್ದೇಶನ ನೀಡಿದ್ದಾರೆ.

ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು, ಸಂಘಟನೆಗಳು ಹಾಗೂ ಸಾಂಸ್ಕೃತಿಕ ವಲಯದವರನ್ನು ಜತೆಗೂಡಿಸಿಕೊಂಡು ಉತ್ಸವ ಯಶಸ್ವಿಗೊಳಿಸಲು ತಿಳಿಸಿದ್ದಾರೆ.

ಹಂಪಿ ಉತ್ಸವ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ಶಾಸಕರು ಸೇರಿ ಜನಪ್ರತಿನಿಧಿಗಳನ್ನು ಒಳಗೊಂಡಂತೆ ಸದ್ಯದಲ್ಲೇ ಸಭೆ ಸಹ ನಡೆಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT