ಶುಕ್ರವಾರ, ಜನವರಿ 27, 2023
21 °C

ವಿಜಯನಗರ: ರಸ್ತೆ ಅಪಘಾತದಲ್ಲಿ ಹಂಪಿ ಕನ್ನಡ ವಿ.ವಿ ಪ್ರಾಧ್ಯಾಪಕ ವಾಸುದೇವನ್ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನ ನಿಕಾಯದ ಡೀನ್, ಪ್ರಾಧ್ಯಾಪಕ ಪ್ರೊ.ಸಿ.ಎಸ್. ವಾಸುದೇವನ್ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಶನಿವಾರ ರಾತ್ರಿ ಜಗಳೂರು ಸಮೀಪದ ಹೆದ್ದಾರಿಯಲ್ಲಿ ನಿಂತ ಲಾರಿಗೆ ಇವರ ಕಾರು ಡಿಕ್ಕಿ ಹೊಡೆದಿದ್ದರಿಂದ ಸ್ಥಳದಲ್ಲೇ ಮೃತರಾಗಿದ್ದಾರೆ. ಕಾರಿನಲ್ಲಿದ್ದ ಇವರ ಮಗ ಹಾಗೂ ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ಗೊತ್ತಾಗಿದೆ.

ಪುರಾತತ್ವ ಹಾಗೂ ಇತಿಹಾಸ ವಿಭಾಗದಲ್ಲಿ ಇವರು ಅನೇಕ ವರ್ಷಗಳವರೆಗೆ ಕೆಲಸ ನಿರ್ವಹಿಸಿದ್ದರು. ಹಂಪಿಗೆ ಯಾರೇ ಗಣ್ಯರು ಬಂದರೆ ಸ್ಮಾರಕಗಳ ಬಗ್ಗೆ ಪರಿಚಯ ಮಾಡಿಕೊಡುತ್ತಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು